ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ನೂತನ ಘಟಕ ಕಾಲೇಜಾಗಿರುವ ಮೂಡುಬಿದಿರೆಯ ವಿಶ್ವವಿದ್ಯಾನಿಲಯ ಕಾಲೇಜು ಬನ್ನಡ್ಕ ಇದರ ಉದ್ಘಾಟನೆ ಮತ್ತು ಪ್ರತಿಭೋತ್ಸವ ಸಮಾರಂಭ ಡಿಸೆಂಬರ್ 17 ರಂದು ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ.
ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಉನ್ನತ ಶಿಕ್ಷಣ, ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಸಿ ಎನ್ ಅಶ್ವಥ್ ನಾರಾಯಣ ನೂತನ ಕಾಲೇಜನ್ನು ಉದ್ಘಾಟಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಸಂಸದ ನಳಿನ್ ಕುಮಾರ್ ಕಟೀಲ್, ಸ್ಥಳೀಯ ಶಾಸಕ ಉಮಾನಾಥ ಎ. ಕೋಟ್ಯಾನ್, ಪಡುಮಾರ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಸಿ ಎಸ್ ಕಲ್ಯಾಣಿ, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ದಯಾನಂದ ಪೈ ಮೊದಲಾದ ಗಣ್ಯರು ಉಪಸ್ಥಿತರಿರಲಿದ್ದಾರೆ, ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ. ಕಿಶೋರ್ ಕುಮಾರ್ ಸಿ ಕೆ ಹಾಗೂ ಕಾಲೇಜಿನ ಸಂಯೋಜಕ ಡಾ. ಗಣಪತಿ ಗೌಡ ತಿಳಿಸಿದ್ದಾರೆ.