News Kannada
Sunday, February 05 2023

ಮಂಗಳೂರು

ಮಂಗಳೂರು: ಯುವಕನನ್ನು ಕಂಬಕ್ಕೆ ಕಟ್ಟಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ  3 ಆರೋಪಿಗಳಿಗೆ ಜಾಮೀನು

Photo Credit : News Kannada

ಮಂಗಳೂರು: ನಗರದ ಹೊರವಲಯದ ಮೂಲ್ಕಿ ಕೆರೆಕಾಡು ಎಂಬಲ್ಲಿ ಯುವಕನನ್ನು ಕಂಬಕ್ಕೆ ಕಟ್ಟಿ ಹಾಕಿ ತೀವ್ರವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಲಯವು ಅವರನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಿದೆ.

ಕೆರೆಕಾಡು ಕೆಂಚನಕೆರೆ ನಿವಾಸಿಗಳಾದ ದಿವೇಶ್ ದೇವಾಡಿಗ(38), ರಾಜೇಶ್ ಹಾಗೂ ಯೋಗೇಶ್ ಕುಮಾರ್(46) ಬಂಧಿತ ಆರೋಪಿಗಳು. ಅವರನ್ನು ಬಂಧಿಸಿರುವ ಮುಲ್ಕಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಎಲ್ಲಾ ಮೂವರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಈ ನಡುವೆ ಹಲ್ಲೆಗೊಳಗಾದ ಹಳೆಯಂಗಡಿ ದಾವೂದ್ ಹಕೀಂ(33) ವಿರುದ್ಧ ಪೊಕ್ಸೊ ಪ್ರಕರಣ ದಾಖಲಾಗಿದ್ದು, ಆತನನ್ನೂ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದಾವೂದ್ ಹಕೀಂ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಿ ಸಂಘ ಪರಿವಾರದ ಕಾರ್ಯಕರ್ತರೆನ್ನಲಾದ ಐವರ ತಂಡವು ಶನಿವಾರ ಕಂಬಕ್ಕೆ ಕಟ್ಟಿ ಹಾಕಿ ತೀವ್ರ ಹಲ್ಲೆ ನಡೆಸಿತ್ತು. ಬಳಿಕ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಹೊಯ್ಸಳ ಪೊಲೀಸರು, ದಾವೂದ್‌ನನ್ನು ವಶಕ್ಕೆ ಪಡೆದು ಮುಲ್ಕಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಇದೀಗ ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.

See also  ಶಿವಮೊಗ್ಗ: ಬಿಜೆಪಿ ಸರ್ಕಾರದ ಶಿಕ್ಷಣದ ನೀತಿಯ ವಿರುದ್ಧ ಎನ್ ಎಸ್ ಯು ಐ ಭಾರಿ ಪ್ರತಿಭಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು