News Kannada
Monday, February 06 2023

ಮಂಗಳೂರು

ಮಂಗಳೂರು ವಿವಿ: ಅನ್ವಯಿಕ ಪ್ರಾಣಿಶಾಸ್ತ್ರ ವಿಭಾಗದಿಂದ ಎರಡು ದಿನಗಳ ರಾಷ್ಟ್ರೀಯ ಕಾರ್ಯಾಗಾರ

Photo Credit : News Kannada

ಉಳ್ಳಾಲ: ಮಂಗಳೂರು ವಿಶ್ವವಿದ್ಯಾನಿಲಯ ಅನ್ವಯಿಕ ಪ್ರಾಣಿಶಾಸ್ತ್ರ ವಿಭಾಗದ ವತಿಯಿಂದ ಜೀವವೈವಿಧ್ಯತೆ ಮತ್ತು ಸಂರಕ್ಷಣೆ ಕುರಿತು ಎರಡು ದಿನಗಳ ರಾಷ್ಟ್ರೀಯ ಕಾರ್ಯಾಗಾರವನ್ನು ವಿವಿಯ ಮಂಗಳಾ ಸಭಾಂಗಣದಲ್ಲಿ ಗುರುವಾರ ಮತ್ತು ಶುಕ್ರವಾರ ಆಯೋಜಿಸಲಾಗಿತ್ತು.

ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಕಾರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯ ಕಾರ್ಯಾದರ್ಶಿ ಶ್ರೀನಿವಾಸುಲು (ಐ.ಎಫ್.ಎಸ್), ಜೀವವೈವಿಧ್ಯತೆ ಮತ್ತು ವನ್ಯಜೀವಿ ಸಂರಕ್ಷಣೆ ಅವಶ್ಯವಾಗಿ ಆಗಬೇಕಿದೆ. ವಿಜ್ಞಾನಿಗಳ ಸಂಶೋಧನೆಗಳು ಜನಸಾಮಾನ್ಯರಿಗೆ ತಲುಪವ ಭಾಷೆಯಲ್ಲಿ ಇರಬೇಕು. ಜೀವವೈವಿಧ್ಯತೆ ಮತ್ತು ಸಂರಕ್ಷಣೆ ಪ್ರಾಮುಖ್ಯತೆ ಅರ್ಥವಾದಾಗ ಮಾತ್ರ ಪ್ರಕೃತಿ ಸಂರಕ್ಷಣೆಯ ಕುರಿತು ಸರ್ಕಾರದ ಕಾನೂನುಗಳನ್ನು ಜಾರಿಮಾಡಲು ಅನುಕೂಲವಾಗುತ್ತದೆ, ಎಂದರು.

ಗೌರವ ಅಥಿತಿ, ದಿಕ್ಸೂಚಿ ಭಾಷಣ ಮಾಡಿದ ಭಾರತೀಯ ವಿಜ್ಞಾನ ಸಂಸ್ಥೆಯ ಖ್ಯಾತ ವಿಜ್ಞಾನಿ ಡಾ. ರಾಮಚಂದ್ರ, ನೀರಿನ ಸಂರಕ್ಷಣೆಯ ಪ್ರಮುಖ್ಯತೆ ಹಾಗೂ ಪಶ್ಚಿಮ ಘಟ್ಟಗಳ ಜೀವ ಸಂಕುಲಗಳ ಸಂರಕ್ಷಣೆ ಕುರಿತು ಮಾತನಾಡುತ್ತಾ, ಪಶ್ಚಿಮ ಘಟ್ಟಗಳ ಸಂರಕ್ಷಣೆ ಅತಿ ಮುಖ್ಯವಾಗಿದೆ, ಎಂದು ಅಭಿಪ್ರಾಪಟ್ಟರು. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ತಮ್ಮ ಅಧ್ಯಕ್ಷೀಯ ಭಾಷಣದಲಿ ದೇಶದ ಬೆಳವಣಿಗೆಗೆ ಸುಸ್ಥಿರ ಅಭಿವೃದ್ಧಿ ಅತ್ಯಾವಶ್ಯಕ. ಆದರೆ ನಾವು ಪರಿಸರ ಸ್ನೇಹಿ ಮಾರ್ಗಗಳನ್ನು ನಮ್ಮ ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳುವುದರ ಮೂಲಕ ಪ್ರಕೃತಿ ಮತ್ತು ಜೀವವೈವಿಧ್ಯತೆಯ ಸಂರಕ್ಷಣೆ ಮಾಡಬಹುದಾಗಿದೆ, ಎಂದರು.

ಕಾರ್ಯಾಗಾರದಲ್ಲಿ ಎಂಟಕ್ಕೂ ಹೆಚ್ಚು ಖ್ಯಾತ ವಿಜ್ಞಾನಿಗಳಿಂದ ಉಪನ್ಯಾಸಗಳನ್ನು ಏರ್ಪಡಿಸಲಾಗಿತ್ತು. ಮೂನ್ನೂರಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದರು. ವಿವಿಧ ಕಾಲೇಜಿಗಳಿಂದ ಮತ್ತು ವಿಶ್ವವಿದ್ಯಾನಿಲಯಗಳ ಮೂವತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಪೋಸ್ಟರ್ ರಚನೆ ಸ್ಪರ್ಧೆಯಲ್ಲಿ ಭಾಗವಸಿದ್ದರು.

ಕಾರ್ಯಗಾರದ ಸಂಯೋಜಕ ಅನ್ವಯಿಕ ಪ್ರಾಣಿಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ನರಸಿಂಹಯ್ಯ ಎನ್, ಅತಿಥಿಗಳನ್ನು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿಭಾಗದ ಮುಖ್ಯಸ್ಥ ಡಾ.ಎಂ.ಎಸ್.ಮುಷ್ತಾಕ್ ವಿಭಾಗದ ಅಧ್ಯಕ್ಷರು ವಂದಿಸಿದರು, ಲಾವಣ್ಯ ಮತ್ತು ಸುಮ ಕೋಟೆ ಕಾರ್ಯಕ್ರಮ ನಿರೂಪಿಸಿದರು.

See also  ದೆಹಲಿಯಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ಪತ್ತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು