News Kannada
Monday, February 06 2023

ಮಂಗಳೂರು

ಮುಡಿಪು: ಡಿ. 25ರಂದು ಕೊಣಾಜೆ ನಡುಪದವು ಮೈದಾನದಲ್ಲಿ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ

Mudipu: D. Bjp workers to hold massive rally at Konaje Nadupadavu ground on May 25
Photo Credit : Wikimedia

ಮುಡಿಪು,ಡಿ. 22: ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಕಾರ್ಯಕರ್ತರ ಬೃಹತ್ ಸಮಾವೇಶ ಡಿ. 25ರಂದು ಭಾನುವಾರ ಕೊಣಾಜೆ ನಡುಪದವು ಬಿಜೆಪಿ ಕಚೇರಿ ಬಳಿಯ ಮೈದಾನದಲ್ಲಿ ಜರಗಲಿದೆ ಎಂದು ದಿ.ಮೈಸೂರ್ ಇಲೆಕ್ಟ್ರಿಕಲ್ಸ್ ನಿಗಮದ ನಿಕಟಪೂರ್ವ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ ಹೇಳಿದರು.

ನಡುಪದವು ಬಿಜೆಪಿ ಚುನಾವಣಾ ಕಚೇರಿಯಲ್ಲಿ ಮಾಹಿತಿ ನೀಡಿದ ಅವರು ಸಮಾವೇಶ ಭಾನುವಾರ ಸಂಜೆ 3.30 ಗಂಟೆಗೆ ಅಸೈಗೋಳಿ ಮೈದಾನದಿಂದ ಕಂಬಳಪದವಿನ ನಡುಪದವು ಚುನಾವಣಾ ಕಾರ್ಯಾಲಯದವರೆಗೆ ಬೃಹತ್ ವಾಹನ ಜಾಥಾ ನಡೆಯಲಿದ್ದು, ಸಂಜೆ 4.30ಕ್ಕೆ ಸಮಾವೇಶ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್, ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಸಮಾಜ ಕಲ್ಯಾಣ ಇಲಾಖೆಯ ಸಚಿವ ಶ್ರೀನಿವಾಸ ಪೂಜಾರಿ, ಬಂದರು ಮತ್ತು ಮೀನುಗಾರಿಕಾ ಸಚಿವ ಅಂಗಾರ ಎಸ್. ವಿಧಾನಪರಿಷತ್ ಸದಸ್ಯ ಪ್ರತಾಪ್‍ಸಿಂಹ ನಾಯಕ್ ಸೇರಿದಂತೆ ರಾಜ್ಯ ಮತ್ತು ಜಿಲ್ಲಾ ಮಟ್ಟದ ನಾಯಕರು ಭಾಗವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಕ್ಷೇತ್ರ ವ್ಯಾಪ್ತಿಯ ನಿವೃತ್ತ ಸೇನಾನಿಗಳು, ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪ್ರತಿಭಾನ್ವಿತರಿಗೆ , ಎಸ್‍ಎಸ್‍ಎಲ್‍ಸಿಯಲ್ಲಿ ಶೇ.90ಕ್ಕಿಂತ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಗೌರವಾಭಿನಂದನೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

See also  ಮಡಿಕೇರಿ: ಚೇರಂಬಾಣೆಯ ಅರುಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು