ಮಂಗಳೂರು: ಬೆಳ್ಳಂ ಬೆಳಗ್ಗೆ ಹಿಂಜಾವೇ ಮೂಡಬಿದರೆ ಕಾರ್ಯಕರ್ತರು ಅಕ್ರಮ ಕಸಾಯಿ ಖಾನೆಗೆ ದಾಳಿ ನಡೆಸಿದ ಘಟನೆ ನಡೆದಿದೆ.
ಮೂಡಬಿದಿರೆಯ ಅಲಂಗಾರು ಆಶ್ರಯ ಕಾಲೋನಿಯಲ್ಲಿರುವ ಗಿಲ್ಬರ್ಟ್ ಮಿರಾಂದ ಎಂಬವನ ಅಕ್ರಮ ಕಸಾಯಿ ಖಾನೆ ಗೆ ಇಂದು ಬೆಳಿಗ್ಗೆ 4 ಗಂಟೆಗೆ ಖಚಿತ ಮಾಹಿತಿ ಮೇರೆಗೆ ಹಿಂಜಾವೇ ಕಾರ್ಯಕರ್ತರು ದಾಳಿ ನಡೆಸಿದ್ದಾರೆ.
ಅಲ್ಲಿ 4 ಗೋವು ಮತ್ತು ಭಾರಿ ಪ್ರಮಾಣದಲ್ಲಿ ಮಾಂಸ ವಶ ಪಡಿಸಿಕೊಂಡಿದ್ದಾರೆ , ನಂತರ ಮೂಡಬಿದ್ರೆ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿದುಬಂದಿದೆ.