News Kannada
Tuesday, February 07 2023

ಮಂಗಳೂರು

ಮಂಗಳೂರು: ಕಾಟಿಪಳ್ಳ ಜಲೀಲ್ ಕೊಲೆ ಪ್ರಕರಣ, ಮೂವರು ಆರೋಪಿಗಳ ಬಂಧನ

Katipalla Jaleel murder case: Three accused arrested
Photo Credit : News Kannada

ಮಂಗಳೂರು: ಕೃಷ್ಣಾಪುರ 4ನೆ ಬ್ಲಾಕ್ ನೈತಂಗಡಿ ಬಳಿ ಶನಿವಾರ ರಾತ್ರಿ ನಡೆದ ಅಬ್ದುಲ್ ಜಲೀಲ್ (43)ರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.

ಮಾಧ್ಯಮದವರಿಗೆ ಈ ಕುರಿತು ಮಾಹಿತಿ ನೀಡಿದ ಪೊಲೀಸ್ ಆಯುಕ್ತರು, ಬಂಧಿತರ ಪೈಕಿ ಇಬ್ಬರು ಕೃತ್ಯದಲ್ಲಿ ನೇರವಾಗಿ ಭಾಗಿಯಾದ ಆರೋಪಿಗಳಾಗಿದ್ದರೆ, ಇನ್ನೋರ್ವ ಆರೋಪಿಗಳಿಗೆ ಬೈಕಿನಲ್ಲಿ ಪರಾರಿಯಾಗಲು ನೆರವಾದವನು ಎಂದು ಮಾಹಿತಿ ನೀಡಿದ್ದಾರೆ.

ಆರೋಪಿಗಳನ್ನು ರವಿವಾರ ರಾತ್ರಿ ಬಂಧಿಸಲಾಗಿದ್ದು, ಅವರನ್ನು ವಿಚಾರಣೆಗೆ ಒಳಪಡಿಸಿದ್ದೇವೆ. ಸದ್ಯದ ವಿಚಾರಣೆಯಲ್ಲಿ ಬಂಧಿತ ಮೂವರು ಕೃತ್ಯದಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ. ಯಾವ ಕಾರಣಕ್ಕೆ ಈ ಕೊಲೆ ಮಾಡಲಾಗಿದೆ, ಇದರಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೆ ಎಂಬುದು ತನಿಖೆಯಿಂದ ತಿಳಿದು ಬರಬೇಕಿದೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಕಸ್ಟಡಿಗೆ ಪಡೆಯಲಾಗುವುದು ಎಂದು ಶಶಿಕುಮಾರ್ ಅವರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಮಹಿಳೆಯರು ಸೇರಿದಂತೆ ಸುಮಾರು 10- 12 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದೇವೆ. ಜಲೀಲ್ ಕುಟುಂಬಸ್ಥರ ಮನವಿಯಂತೆ ಪ್ರಕರಣಕ್ಕೆ ಸಂಬಂಧಿಸಿ ಸಮಗ್ರ ತನಿಖೆ ನಡೆಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಹೇಳಿದ್ದಾರೆ.

See also  ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಹೊಂದಿದ್ದ ನಾಲ್ವರು ಆರೋಪಿಗಳ ಸೆರೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು