News Kannada
Tuesday, January 31 2023

ಮಂಗಳೂರು

ಮುಡಿಪು: ಕಾರು ಅಪಘಾತಕ್ಕೆ ವಿದ್ಯಾರ್ಥಿ ಬಲಿ

Mudipu: Student killed in car accident
Photo Credit : News Kannada

ಉಳ್ಳಾಲ: ರಸ್ತೆ ಬದಿ ನಿಂತಿದ್ದ ಎಂಟನೇ ತರಗತಿ ವಿದ್ಯಾರ್ಥಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸಂಭವಿಸಿದೆ.

ಬೋಳಿಯಾರು ಭಟ್ರಬೈಲು ನಿವಾಸಿ ಹರಿಶ್ಚಂದ್ರ -ಅರುಣಾಕ್ಷಿ ದಂಪತಿ ಪುತ್ರ ಕಾರ್ತಿಕ್ (14) ಮೃತ ಬಾಲಕ. ಮುಡಿಪು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ವಿದ್ಯಾರ್ಥಿಯಾಗಿದ್ದನು. ಶಾಲೆ ಬಿಟ್ಟು ಮನೆಗೆ ತೆರಳಲು ರಸ್ತೆಬದಿಯಲ್ಲಿ ನಿಂತಿದ್ದ ಬಾಲಕನಿಗೆ ಮುಡಿಪು ಕಡೆಗೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಕಾರು ಚಾಲಕನ ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣವೆನ್ನಲಾಗಿದೆ. ಬಾಲಕನಿಗೆ ಡಿಕ್ಕಿ ಹೊಡೆದ ಕಾರು ನಂತರ ಸಮೀಪದಲ್ಲೇ ಇದ್ದ ರಿಕ್ಷಾಗೂ ಡಿಕ್ಕಿ ಹೊಡೆದಿದ್ದಾನೆ. ಕಾರು ಮಾಲೀಕ ಟ್ರಯಲ್ ನೋಡಲು ಇನ್ನೋರ್ವ ಗೆಳೆಯನಿಗೆ ಕಾರು ನೀಡಿದ್ದ ಸಂದರ್ಭ ಘಟನೆ ಸಂಭವಿಸಿದೆ ಎನ್ನಲಾಗಿದೆ. ಮಂಗಳೂರು ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸರಣಿ ಅಪಘಾತ!
ನಿಂತಿದ್ದ ಬಸ್ಸನ್ನು ಓವರ್‍ಟೇಕ್ ಮಾಡುವ ಭರದಲ್ಲಿ ಕಾರು ಸವಾರ ಎದುರುಗಡೆಯಿದ್ದ ರಿಕ್ಷಾ, ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದು ನಂತರ ಬಾಲಕನಿಗೆ ಡಿಕ್ಕಿ ಹೊಡೆದಿದೆ. ತಲೆಗೆ ಗಂಭೀರ ಗಾಯಗೊಂಡು ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಾಲಾ-ಕಾಲೇಜು ಮುಂಭಾಗದಲ್ಲಿ ವಾಹನಗಳ ಅತಿವೇಗದ ಚಾಲನೆಯ ಕಡಿವಾಣಕ್ಕೆ ರಸ್ತೆಯಲ್ಲಿ ಉಬ್ಬುಗಳನ್ನು ಅಳವಡಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದರೂ, ಈವರೆಗೆ ಅಳವಡಿಸದೆ ಸಂಬಂಧಪಟ್ಟ ಅಧಿಕಾರಿಗಳು ತೋರಿಸಿರುವ ಬೇಜವಾಬ್ದಾರಿಯೇ ಬಾಲಕನ ಸಾವಿಗೆ ಕಾರಣ ಅನ್ನುವ ಆರೋಪವನ್ನು ಸ್ಥಳದಲ್ಲಿ ಸೇರಿದವರು ಮಾಡಿದ್ದಾರೆ.

See also  ಮಾಸ್ಕೋ: ರಷ್ಯಾದ ಕೆಫೆಯೊಂದರಲ್ಲಿ ಅಗ್ನಿ ದುರಂತ, 13 ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು