ಮಂಗಳೂರು: ಕೃಷ್ಣಾಪುರ ನಿವಾಸಿ ಜಲೀಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೋರ್ವ ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದು, ಬಂಧಿತರ ಸಂಖ್ಯೆ ನಾಲ್ಕಕ್ಕೇರಿದೆ.ಕಾಟಿಪಳ್ಳ ನಿವಾಸಿ ಲಕ್ಷ್ಮೀಶ ದೇವಾಡಿಗ (28) ಬಂಧಿತ.
ಈ ಮೊದಲು ಕೃಷ್ಣಾಪುರ ನೈತಂಗಡಿ ನಿವಾಸಿ ಶೈಲೇಶ್ ಅಲಿಯಾಸ್ ಶೈಲೇಶ್ ಪೂಜಾರಿ(21), ಉಡುಪಿಯ ಹೆಜಮಾಡಿ ನಿವಾಸಿ ಸವಿನ್ ಕಾಂಚನ್ ಅಲಿಯಾಸ್ ಮುನ್ನ (24) ಕೃಷ್ಣಾಪುರ 3ನೇ ಬ್ಲಾಕ್ ನಿವಾಸಿ ಪವನ್ ಅಲಿಯಾಸ್ ಪಚ್ಚು (23) ಎಂಬಾತನನ್ನು ಪೊಲೀಸರು ಬಂಧಿಸಿದ್ದರು.
ಕೃಷ್ಣಾಪುರ ನಿವಾಸಿ ಜಲೀಲ್ ಅವರನ್ನು ನೈತಂಗಡಿ ಎಂಬಲ್ಲಿರುವ ಅವರ ಫ್ಯಾನ್ಸಿ ಮತ್ತು ಚಪ್ಪಲಿಯ ಅಂಗಡಿಯ ಮುಂಭಾಗ ಚೂರಿಯಿಂದ ಇರಿದು ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದರು.