ಕನ್ಯಾಡಿ: ಕಾರು – ಬೈಕ್ ನಡುವೆ ಭೀಕರ ಅಪಘಾತ ನಡೆದಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡಿರುವ. ಘಟನೆ ಧರ್ಮಸ್ಥಳ ಸಮೀಪದ ಕನ್ಯಾಡಿಯಲ್ಲಿ ಶುಕ್ರವಾರ ನಡೆದಿದೆ.
ಧರ್ಮಸ್ಥಳದಿಂದ ಉಜಿರೆ ಕಡೆ ಬರುತ್ತಿದ್ದ ಬೈಕ್ ಹಾಗೂ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ಬೆಂಗಳೂರು ಕಡೆಯ ಕಾರು ಧರ್ಮಸ್ಥಳ ಗ್ರಾಮದ ಕನ್ಯಾಡಿಯ ಬಳಿಯ ತಿರುವಿನಲ್ಲಿ ಬೈಕ್ ಗೆ ಡಿಕ್ಕಿ ಹೊಡೆದು ಸವಾರ ಧರ್ಮಸ್ಥಳ ನಿವಾಸಿ ನೈನಾಚನ್ ಎಂಬವರ ಪುತ್ರ ನಿತೇಶ್(28)ಗಂಭೀರ ಗಾಯಗೊಂಡಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ವೇಳೆ ಕಾರಿನ ಏರ್ ಬ್ಯಾಗ್ ತೆರೆದುಕೊಂಡ ಕಾರಣ ಕಾರಿನಲ್ಲಿದ್ದವರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.
ಕಳಚಿ ಬಿದ್ದ ಬೈಕ್ ಚಕ್ರ
ಅಪಘಾತದ ರಭಸಕ್ಕೆ ಬೈಕ್ ನ ಮುಂಭಾಗದ ಚಕ್ರ ಕಳಚಿ ಹೋಗಿದ್ದು , ಕಾರಿಗೂ ಹಾನಿಯಾಗಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲು ಶೌರ್ಯ ವಿಪತ್ತು ತಂಡದ ಸುಧೀರ್ ಕಲ್ಮಂಜ ಹಾಗೂ ಸ್ಥಳೀಯರು ನೆರವಾದರು.