News Kannada
Sunday, January 29 2023

ಮಂಗಳೂರು

ಮಲ್ಪೆ: ಸೀವಾಕ್ ವೇ ಸಮುದ್ರ ತೀರದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ, ಆತ್ಮಹತ್ಯೆ ಶಂಕೆ

Malpe: Man's body found on Seawalk way beach, suicide suspected
Photo Credit : News Kannada

ಮಲ್ಪೆ: ಇಲ್ಲಿನ ಸೀವಾಕ್ ವೇ ಸಮುದ್ರ ತೀರದಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಸಿಕ್ಕಿದ ಘಟನೆ ಶುಕ್ರವಾರ ನಡೆದಿದೆ.

ಮಲ್ಪೆಯ ಕೊಡವೂರು ಗ್ರಾಮದ 69ವರ್ಷದ ಅಚ್ಚುತ್ ಕಿಣಿ ಮೃತದುರ್ದೈವಿ. ಇವರಿಗೆ ಒಂದು ವಾರದ ಹಿಂದೆ ಹರ್ನಿಯ ಶಸ್ತ್ರಚಿಕಿತ್ಸೆ ಆಗಿತ್ತು. ಶಸ್ತ್ರ ಚಿಕಿತ್ಸೆಗೆ ಹೆಚ್ಚು ಹಣ ಖರ್ಚಾಗಿದೆ. ನಾನು ಮನೆಯವರಿಗೆ ಹೊರೆಯಾಗುತ್ತಿದ್ದೇನೆಂದು ಪದೇ ಪದೇ ಹೇಳಿಕೊಳ್ಳುತ್ತಿದ್ದರು.

ಇದೇ ಚಿಂತೆಯಲ್ಲಿ ನಿನ್ನೆ ರಾತ್ರಿ ಊಟ ಮಾಡಿ ಮಲಗಿದ್ದವರು, ಇಂದು‌ ಬಿಳಿಗ್ಗೆ ಮನೆಯಿಂದ ನಿಗೂಢವಾಗಿ ಕಣ್ಮರೆಯಾಗಿದ್ದರು. ಮನೆಯವರು ಹುಡುಕಾಟ ನಡೆಸಿದಾಗ ಮಲ್ಪೆ ಸೀವಾಕ್ ವೇ ಸಮುದ್ರ ತೀರದಲ್ಲಿ ಅಚ್ಚುತ್ ಕಿಣಿ ಅವರ ಮೃತದೇಹ ಪತ್ತೆಯಾಗಿದೆ.

ಅವರು ಆರ್ಥಿಕ‌ ಹೊರೆಯ ಚಿಂತೆಯಿಂದ ಬೇಸತ್ತು ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ಖಾಸಗಿ ಬಂದರು ನಿರ್ಮಾಣ ವಿರೋಧಿಸಿ ಮೀನುಗಾರರ ಹೋರಾಟಕ್ಕೆ ಕಾಂಗ್ರೆಸ್‌ ಬೆಂಬಲ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು