News Kannada
Sunday, January 29 2023

ಮಂಗಳೂರು

ಸುರತ್ಕಲ್: ಬೇಕಾಬಿಟ್ಟಿ ರಸ್ತೆ ಅಗೆದ್ರೆ ಕ್ರಿಮಿನಲ್ ಕೇಸ್ ಹಾಕಿ ಜೈಲಿಗೆ ಹಾಕಿಸ್ತೀನಿ- ಭರತ್ ಶೆಟ್ಟಿ

Photo Credit : News Kannada

ಸುರತ್ಕಲ್: “ಪೈಪ್ ಲೈನ್ ಗಾಗಿ ಎಲ್ಲೆಂದರಲ್ಲಿ ಬೇಕಾಬಿಟ್ಟಿ ರಸ್ತೆ ಅಗೆದು ಜನರಿಗೆ ತೊಂದರೆ ಉಂಟುಮಾಡಿದರೆ ಕ್ರಿಮಿನಲ್ ಕೇಸ್ ಹಾಕಿ ಜೈಲಿಗೆ ಹಾಕಿಸ್ತೀನಿ” ಹೀಗೆಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಗೇಲ್ ಕಂಪೆನಿಯ ಅಧಿಕಾರಿಗಳಿಗೆ ಬಹಿರಂಗ ಎಚ್ಚರಿಕೆ ನೀಡಿದ ಘಟನೆ ಬುಧವಾರ ನಡೆಯಿತು.

ದೇರೆಬೈಲ್ ಕೊಂಚಾಡಿ ಬಳಿ ರಸ್ತೆ ಕಾಮಗಾರಿಯ ಗುದ್ದಲಿಪೂಜೆಗೆ ಬಂದಿದ್ದ ಶಾಸಕರಲ್ಲಿ ಸ್ಥಳೀಯರು ಗೇಲ್ ಕಂಪೆನಿ ಅಧಿಕಾರಿಗಳು ಎಲ್ಲೆಂದರಲ್ಲಿ ರಸ್ತೆಯನ್ನು ಅಗೆಯುತ್ತಿದ್ದು ಇದರಿಂದ ನೀರಿನ ಪೈಪ್ ಒಡೆದು ಸಮಸ್ಯೆ ಸೃಷ್ಟಿಯಾಗಿದೆ ಎನ್ನುವುದನ್ನು ಗಮನಕ್ಕೆ ತಂದರು.

ಈ ವೇಳೆ ಸ್ಥಳದಲ್ಲೇ ಇದ್ದ ಕಂಪೆನಿ ಅಧಿಕಾರಿಗಳನ್ನು ಕರೆದ ಶಾಸಕರು, “ಬೇಕಾಬಿಟ್ಟಿ ಕಾಮಗಾರಿ ಮಾಡಬೇಡಿ, ಏನೇ ಮಾಡೋದಿದ್ರೂ ಸ್ಥಳೀಯ ಕಾರ್ಪೋರೇಟರ್ ಹಾಗೂ ಸಾರ್ವಜನಿಕರ ಗಮನಕ್ಕೆ ತಂದು ಬಳಿಕ ಮಾಡಿ. ನಿಮ್ಮಿಂದಾಗಿ ನಗರ ಪಾಲಿಕೆಯ ಎಲ್ಲಾ ಕಡೆಗಳಲ್ಲಿ ಸಮಸ್ಯೆಯಾಗುತ್ತಿದೆ. 10-15 ದಿನಗಳು ನೀರಿಲ್ಲದಿದ್ದರೆ ಜನರು ಏನು ಮಾಡಬೇಕು? ಅಲ್ಲಲ್ಲಿ ಅಗೆದು ಗುಂಡಿಯನ್ನು ಹಾಗೇ ಬಿಟ್ಟಿದ್ದೀರಿ. ನನ್ನ ಕ್ಷೇತ್ರದಲ್ಲಿ ಒಬ್ಬ ದ್ವಿಚಕ್ರ ಸವಾರರು ಗುಂಡಿಗೆ ಬಿದ್ದು ಅನಾಹುತ ಆದ್ರೂ ಸುಮ್ಮನಿರಲ್ಲ. ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಹಾಕಿ ಜೈಲಿಗೆ ಹಾಕ್ತೀನಿ” ಎಂದು ಎಚ್ಚರಿಕೆ ನೀಡಿದರು. ಈ ವೇಳೆ ಕಂಪೆನಿ ಅಧಿಕಾರಿ ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳುವುದಾಗಿ ಹೇಳಿದರು.

See also  ಕಾರವಾರ: ಕ್ಷೇತ್ರದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ- ಮಾಜಿ ಸಚಿವ ಆನಂದ ಅಸ್ನೋಟಿಕರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು