News Kannada
Wednesday, February 01 2023

ಮಂಗಳೂರು

ಬೆಳ್ತಂಗಡಿ: ರಾಜ್ಯಾದ್ಯಂತ 16,239 ಶ್ರದ್ದಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ

Belthangady: Cleanliness drive at 16,239 shradha kendras across the state
Photo Credit : By Author

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜನರ ಸಹಭಾಗಿತ್ವದಲ್ಲಿ 7 ನೇ ವರ್ಷದ ಮಕರ ಸಂಕ್ರಾಂತಿ ಸಂದರ್ಭ ನಡೆಯಲಿದೆ.

ಧಾರ್ಮಿಕ ಶ್ರದ್ಧಾಕೇಂದ್ರಗಳು ಗ್ರಾಮಗಳ ಪ್ರಮುಖ ಭಾಗವಾಗಿದ್ದು. ಇವುಗಳನ್ನು ಸ್ವಚ್ಛವಾಗಿ ಇಟ್ಟುಕೊಂಡಲ್ಲಿ ಪರಿಸರ ಸ್ವಚ್ಛತಾ ಮನೋಭಾವವು ಸಾರ್ವತ್ರಿಕವಾಗಿರುತ್ತದೆ ಎಂಬ ಶ್ರೀ ಕ್ಷೇತ್ರ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಮತ್ತು ಮಾತೃಶ್ರೀ ಹೇಮಾವತಿ ಹೆಗ್ಗಡೆಯವರ ಚಿಂತನೆಯಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖಾಂತರ ಜನ ಸಹಭಾಗಿತ್ವದಲ್ಲಿ ಶ್ರದ್ಧಾಕೇಂದ್ರಗಳ ಬೃಹತ್ ಸ್ವಚ್ಛತಾ ಅಭಿಯಾನವನ್ನು ಕೈಗೊಳ್ಳಲಾಗುತ್ತಿದೆ. ವರ್ಷದಲ್ಲಿ 2 ಬಾರಿ ಅಂದರೆ ಆಗಸ್ಟ್ 15 ಮತ್ತು ಜನವರಿ 14 ರ ಸಂದರ್ಭ ಸಪ್ತಾಹದ ಮೂಲಕ ಸ್ವಯಂ ಸೇವಕರು ಶ್ರದ್ಧಾಕೇಂದ್ರಗಳಾದ ದೇವಸ್ಥಾನ, ಬಸದಿ, ಮಸೀದಿ, ಚರ್ಚ್‍ಗಳ ಸ್ವಚ್ಛತೆಯನ್ನು ಕೈಗೊಳ್ಳುತ್ತಾರೆ.

ಕಳೆದ 7 ವರ್ಷಗಳಿಂದ ನಿರಂತರವಾಗಿ ಸ್ವಸಹಾಯ ಸಂಘಗಳ ಸದಸ್ಯರು ಶ್ರದ್ಧಾಕೇಂದ್ರದ ಸ್ವಚ್ಛತೆಯನ್ನು ಕೈಗೊಳ್ಳುತ್ತಿದ್ದು, ಈ ಬಾರಿ ಮಕರ ಸಂಕ್ರಾತಿ ಅಂದರೆ ಉತ್ತರಾಯಣ ಪುಣ್ಯ ಕಾಲ ಜನವರಿ 14 ರ ಮೊದಲು ರಾಜ್ಯದ ಎಲ್ಲಾ ಶ್ರದ್ಧಾಕೇಂದ್ರಗಳು ಸ್ವಚ್ಛ ಹಾಗೂ ಪಾವಿತ್ರ್ಯತೆಯಿಂದ ಕೂಡಿರಬೇಕೆಂಬ ಉದ್ದೇಶದಿಂದ ಜನವರಿ 7 ರಿಂದ 13 ರವರೆಗೆ ಶ್ರದ್ಧಾಕೇಂದ್ರಗಳ ಸ್ವಚ್ಛತಾ ಸಪ್ತಾಹವನ್ನು ನಡೆಸಲಾಗುತ್ತಿದೆ.

ರಾಜ್ಯದಾದ್ಯಂತ 16,239 ಶ್ರದ್ಧಾಕೇಂದ್ರಗಳನ್ನು ಗುರುತಿಸಲಾಗಿದ್ದು ಸುಮಾರು 4,07,043 ಸ್ವಯಂ ಸೇವಕರು, ದೇವಾಲಯದ ಆಡಳಿತ ಮಂಡಳಿ, ಒಕ್ಕೂಟದ ಪದಾಧಿಕಾರಿಗಳು, ಜನಜಾಗೃತಿ ಸದಸ್ಯರು, ನವಜೀವನ ಸಮಿತಿಯ ಸದಸ್ಯರು, ಶೌರ್ಯ ವಿಪತ್ತು ನಿರ್ವಹಣೆಯ ಸದಸ್ಯರು, ಸ್ವಚ್ಛತಾ ಸೇನಾನಿಗಳು, ಊರಿನ ಗಣ್ಯರು, ಗ್ರಾಮಪಂಚಾಯತ್‍ನ ಸದಸ್ಯರು ವಿವಿಧ ಸಂಘ ಸಂಸ್ಥೆಯ ಕಾರ್ಯಕರ್ತರು ಭಾಗವಹಿಸಿ ರಾಜ್ಯಾದಾದ್ಯಂತ ನಡೆಯುವ ಸ್ವಚ್ಛತಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಿದ್ದಾರೆ.
ನಡೆಯುವ ಸ್ವಚ್ಛತಾ ಕಾರ್ಯಕ್ರಮಗಳ ವಿವರ:

 ದೇವಸ್ಥಾನದ ಸುತ್ತಮುತ್ತಲಿನ ಗಿಡ ಘಂಟಿಗಳನ್ನು ತೆಗೆದು ಸ್ವಚ್ಛಗೊಳಿಸುವುದು.
 ಮಂದಿರ, ಮಸೀದಿ, ಚರ್ಚ್‍ಗಳ ಆವರಣ ಸ್ವಚ್ಛತೆ, ಒಳಾಂಗಣ ಸ್ವಚ್ಛತೆಗೆ ಆದ್ಯತೆ ನೀಡಲಾಗುವುದು.
 ದೇವಸ್ಥಾನದ ಕಲ್ಯಾಣಿ, ಸಭಾಭವನ, ಅಶ್ವಥ ಕಟ್ಟೆ/ಅರಳಿಕಟ್ಟೆ ಸ್ವಚ್ಛಗೊಳಿಸುವುದು.
 ಧಾರ್ಮಿಕ ಶ್ರದ್ಧಾಕೇಂದ್ರಗಳ ಸ್ನಾನಕಟ್ಟೆ, ನದಿ ತೀರಗಳಲ್ಲಿ ಸ್ವಚ್ಛತಾ ಕಾರ್ಯವನ್ನು ಕೈಗೊಂಡು ಪ್ಲಾಸ್ಟಿಕ್, ಬಟ್ಟೆಬರೆ ಕಸಗಳನ್ನು ನದಿಗೆ ಎಸೆಯದಂತೆ ಅರಿವು ಮೂಡಿಸಲಾಗುವುದು.
 ಶ್ರದ್ಧಾ ಕೇಂದ್ರದ ಪರಿಕರಗಳನ್ನು ಸ್ವಚ್ಛಗೊಳಿಸುವುದು.
 ಸಾರ್ವಜನಿಕ ಶೌಚಾಲಯ, ನಗರ ಸ್ವಚ್ಛತೆ, ಬೀದಿ ಸ್ವಚ್ಛತೆಗೆ ಒತ್ತು ನೀಡಲಾಗುವುದು.
 ಶ್ರದ್ಧಾಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ, ಬಟ್ಟೆ ಚೀಲ ಬಳಕೆ ಮಾಡುವುದು.
 ಜಾತ್ರೆ, ವಿಶೇಷ ಕಾರ್ಯಕ್ರಮದ ದಿನ ಸ್ವಚ್ಛತೆಗೆ ತಂಡ ರಚಿಸಿ ಜಾಗೃತಿ ಮೂಡಿಸುವುದು.
 ಸ್ವಚ್ಛತೆಯ ಬಗ್ಗೆ ನಿಗಾ ವಹಿಸುವ ಆಸಕ್ತ ಸ್ವಯಂಸೇವಕರ ಕಾವಲು ಸಮಿತಿ ರಚನೆ ಮಾಡುವುದು.
 ತ್ಯಾಜ್ಯಗಳನ್ನು ಬಿಸಾಡಲು ಬಿದಿರಿನ ಬುಟ್ಟಿ, ಡಸ್ಟ್‍ಬಿನ್, ತಗಡಿನ ಡಬ್ಬ ಇತ್ಯಾದಿಗಳನ್ನು ಇಟ್ಟು ಕಸವನ್ನು ಅಲ್ಲಿಯೇ ಹಾಕುವಂತೆ ಭಕ್ತಾದಿಗಳಿಗೆ ಸೂಚನೆ ನೀಡುವ ಫಲಕಗಳನ್ನು ಹಾಕುವುದು.

See also  ವಿಜಯಪುರ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಿಗೆ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಘೋಷಣೆ

ಧಾರ್ಮಿಕ ಕೇಂದ್ರಗಳ ಪಾವಿತ್ರ್ಯತೆ ಕಾಪಾಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಶ್ರದ್ಧಾ ಕೇಂದ್ರಗಳ ಶುಚಿತ್ವ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಗುವುದು ಎಂದು ಶ್ರೀ ಕ್ಷೇತ್ರ ಧ.ಗ್ರಾ.ಯೋ.ಕಾರ್ಯನಿರ್ವಾಹಕ ನಿರ್ದೇಶಕ ಎಲ್.ಎಚ್.ಮಂಜುನಾಥ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

154
Deepak Atavale

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು