News Kannada
Saturday, January 28 2023

ಮಂಗಳೂರು

ಸುಳ್ಯ: ಹತ್ಯೆ ಪ್ರಕರಣ, ಮಡಿಕೇರಿಯ ತುಫೈಲ್ ಸೇರಿದಂತೆ ನಾಲ್ವರ ಸುಳಿವಿಗೆ 14 ಲಕ್ಷ ಘೋಷಿಸಿದ ಎನ್ಐಏ

NIA announces Rs 14 lakh reward for clues to four including Praveen Nettaru murder case, Tufail of Madikeri
Photo Credit : By Author

ಸುಳ್ಯ: ಇಲ್ಲಿಗೆ ಸಮೀಪದ ಬೆಳ್ಳಾರೆ ನಿವಾಸಿ, ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ನಾಲ್ವರು ಆರೋಪಿಗಳಿಗೆ ಪೊಲೀಸರು ವ್ಯಾಪಕ ಶೋಧ ನಡೆಸುತ್ತಿದ್ದಾರೆ. ಈ ಆರೋಪಿಗಳನ್ನು ಪತ್ತೆ ಹಚ್ಚಲು ಸಹಾಯ ಮಾಡುವವರಿಗೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಇದೀಗ ಒಟ್ಟು 14 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಪ್ರಕಟಿಸಿದೆ.

ಆರೋಪಿಗಳಾದ ಸುಳ್ಯದ ಬುದು ಹೌಸ್ ನ ಎಸ್. ಮುಹಮ್ಮದ್ ಮುಸ್ತಫಾ ಯಾನೆ ಮುಸ್ತಫ ಪೈಚಾರ್ ಮತ್ತು ಮಡಿಕೇರಿಯ ಎಂ.ಎಚ್.ತುಫೈಲ್ ಕುರಿತು ಸುಳಿವು ನೀಡುವವರಿಗೆ ತಲಾ 5 ಲಕ್ಷ ರೂಪಾಯಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲುಮುಟ್ಟಲು ವೀಟಿಲ್ ಎಂ.ಆರ್.ಉಮ್ಮರ್ ಫಾರೂಕ್ ಯಾನೆ ಉಮ್ಮರ್, ಸಿದ್ದಿಕ್ ಯಾನೆ ಪೈಂಟರ್ ಸಿದ್ದಿಕ್ ಯಾನೆ ಗುಜರಿ ಸಿದ್ದಿಕ್ ಕುರಿತು ಮಾಹಿತಿ ನೀಡುವವರಿಗೆ ತಲಾ 2 ಲಕ್ಷ ರೂ. ನೀಡಲಾಗುವುದು ಎಂದು ಕೇರಳದ ಹಲವೆಡೆ ಅಂಟಿಸಲಾಗಿರುವ ನೆೋಟೀಸ್ ನಲ್ಲಿ ಎನ್ಐಎ ತಿಳಿಸಿದೆ.

ಈ ನಾಲ್ವರು ಆರೋಪಿಗಳು ಕೇರಳದಲ್ಲಿ ತಲೆಮರೆಸಿಕೊಂಡಿರುವ ಶಂಕೆಯಿದ್ದು ನೆೋಟಿಸ್ ಪ್ರತಿಗಳನ್ನು ಕಲ್ಲಿಕೋಟೆ ಜಿಲ್ಲೆಯ ವಿವಿಧೆಡೆ ಮತ್ತು ಕಾಸರಗೋಡು ಜಿಲ್ಲೆಯ ಹಲವು ಕಡೆಗಳಲ್ಲಿ ಹಾಕಲಾಗಿದೆ ಎಂದು ತಿಳಿದು ಬಂದಿದೆ.

ಕಳೆದ ವರ್ಷ ಜುಲೈ 26ರಂದು ಪ್ರವೀಣ್ ನೆಟ್ಟಾರು ಅವರನ್ನು ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಭೀಕರವಾಗಿ ಕೊಲೆಗೈದು ಪರಾರಿಯಾಗಿದ್ದರು. ನಂತರ ನಡೆದ ಬೆಳವಣಿಗೆಗಳಲ್ಲಿ ಕೊಲೆಗೆ ಸಹಕಾರ ನೀಡಿದ ಹಲವು ಆರೋಪಿಗಳನ್ನು ಬಂಧಿಸಲಾಗಿತ್ತು. ಈಗಾಗಲೇ ಕರ್ನಾಟಕದ ಹಲವೆಡೆ ನಾಲ್ವರು ಆರೋಪಿಗಳ ಮಾಹಿತಿ ನೀಡುವಂತೆಯೂ ನೋಟಿಸ್ ಹಾಕಲಾಗಿದೆ.

ಬಿಜೆಪಿಯ ಯುವ ಮುಖಂಡರಾಗಿದ್ದ ಪ್ರವೀಣ್ ನೆಟ್ಟಾರು ಎಂಬುವವರ ಮೇಲೆ ಕಳೆದ ವರ್ಷ ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದರು. ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕೂಡಲೇ ಸಾಗಿಸಲಾಗಿತ್ತು. ಆದರೆ ಅವರು ಮಾರ್ಗಮಧ್ಯೆ ಸಾವಿಗೀಡಾಗಿದ್ದರು. ಇವರ ಹತ್ಯೆ ಖಂಡಿಸಿ ಪುತ್ತೂರು ತಾಲೂಕಿನಲ್ಲಿ ಸರ್ಕಾರಿ ಬಸ್ ಮೇಲೆ ಕಲ್ಲು ತೂರಾಟದಿಂದ ಹಿಡಿದು, ಹಿಂದೂ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದ್ದರು. ಶಾಸಕ ಸಂಜೀವ ಮಠಂದೂರು, ಎಸ್.ಅಂಗಾರ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳೀನ್ ಕುಮಾರ್ ಕಟೀಲ್ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಲ್ಲಿ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. ನಂತರ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಲಾಗಿತ್ತು.

ಆರೋಪಿಗಳ ಹತ್ಯೆಗೆ ಸಂಬಂಧಿಸಿ ಪೊಲೀಸ್ ಇಲಾಖೆ ವಿಶೇಷ ತಂಡಗಳನ್ನು ರಚಿಸಿತ್ತು. ಕೃತ್ಯ ನಡೆದ 15 ದಿನದಲ್ಲೇ 7 ಆರೋಪಿಗಳನ್ನು ಬಂದಿಸಲಾಗಿತ್ತು. ದಿನಾಂಕ 5-11-2021 ರಂದು ಖಚಿತ ಸುಳಿವಿನ ಮೇರೆಗೆ ರಾಜ್ಯದ ಬೆಂಗಳೂರು, ಹುಬ್ಬಳ್ಳಿ , ಮಡಿಕೇರಿ , ಕೇರಳದ ಕಲ್ಲಿ ಕೋಟೆಯಲ್ಲಿ ಧಾಳಿ ನಡೆಸಿದ ಎನ್ಐಏ ಅಧಿಕಾರಿಗಳು ಮೂವರನ್ನು ಬಂಧಿಸುವಲ್ಲಿ ಯಶಸ್ವಿ ಆಗಿದ್ದರೂ ಮೇಲಿನ ನಾಲ್ವರು ಆರೋಪಿಗಳು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿ ಆಗಿದ್ದರು.

See also  ಇಲ್ಲೊಂದು ವಿಶಿಷ್ಟ ರೀತಿಯ ಮದುವೆ ಆಮಂತ್ರಣ ಪತ್ರಿಕೆ

ಈ ಪ್ರಕರಣದಲ್ಲಿ ಇದುವರೆಗೆ 10 ಆರೋಪಿಗಳನ್ನು ಬಂಧಿಸಲಾಗಿದ್ದು ಎಲ್ಲರೂ ನಿಷೇಧಿತ ಪಾಪುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯೊಂದಿಗೆ ನಿಕಟ ಸಂಪರ್ಕ ಹೊಂದಿದವರಾಗಿದ್ದಾರೆ. ಈ ಪ್ರಕರಣದಲ್ಲಿ ಇನ್ನೂ ನಾಲ್ಕು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರನ್ನು ಬಂಧಿಸುವ ಪ್ರಯತ್ನ ನಡೆದಿದೆ. ಈ ದುಷ್ಕರ್ಮಿಗಳ ಗುರುತು ಪತ್ತೆಯಾಗಿದ್ದರೂ ಆವರು ಅಡಗಿ ಕೂತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್ಇಎ) ಬಹುಮಾನ ಘೋಷಿಸಿದ್ದು ಆರೋಪಿಗಳ ಬಂಧನಕ್ಕೆ ತೀವ್ರ ಹುಡುಕಾಟ ನಡೆಸುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1620
Coovercolly Indresh

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು