News Kannada
Tuesday, February 07 2023

ಮಂಗಳೂರು

ಸುರತ್ಕಲ್‌: ಹೃದಯಾಘಾತದಿಂದ ಬಾಲಕ ಸಾವು

Surathkal: Boy dies of cardiac arrest
Photo Credit : News Kannada

ಸುರತ್ಕಲ್‌: ಶಾಲೆಗೆ ಹೊರಡಲು ಸಿದ್ದನಾಗುತ್ತಿದ್ದ ಬಾಲಕನೊಬ್ಬ ಹೃದಯಾಘಾತಕ್ಕೆ ತುತ್ತಾಗಿ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.

ಕೃಷ್ಣಾಪುರ 7ನೇ ಬ್ಲಾಕ್‌ ನಿವಾಸಿ ಮೊಹಮ್ಮದ್‌ ಹಸೀಮ್‌ (17) ಮೃತ ಬಾಲಕ. ಬೆಳಗ್ಗೆ ಸಿದ್ದನಾಗಿದ್ದ ಹಸೀಮ್‌ಗೆ ಏಕಾಏಕಿ ತಲೆ ಸುತ್ತು ಬಂದು ಬಿದ್ದಿದ್ದು, ಮನೆಮಂದಿ ತತ್‌ಕ್ಷಣ ಸಮೀಪದ ಆಸ್ಪತ್ರೆಗೆ ಕರೆದೊಯ್ದರು.

ಆದರೆ ಅಲ್ಲಿ ಮೃತಪಟ್ಟಿರುವ ಬಗ್ಗೆ ವೈದ್ಯರು ತಿಳಿಸಿದ್ದು, ಬದುಕುಳಿಯುವ ಆಸೆಯಿಂದ ಪೋಷಕರು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಅಬ್ದುಲ್‌ ರೆಹಮಾನ್‌ ದಂಪತಿ ಮೂವರು ಪುತ್ರರಲ್ಲಿ ಮೃತ ಹಸೀಮ್‌ ಎರಡನೆಯವನಾಗಿದ್ದಾನೆ.

ಮರಣೋತ್ತರ ಪರೀಕ್ಷೆ-ಗೊಂದಲ ಖಾಸಗಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಲು ಮುಂದಾದಾಗ ಪೋಷಕರು ಮೃತದೇಹವನ್ನು ಕೊಂಡೊಯ್ಯುವ ಬಗ್ಗೆ ವೈದ್ಯರಲ್ಲಿ ತಿಳಿಸಿದ್ದರು. ಆದರೆ ವೈದ್ಯರು ಮರಣೋತ್ತರ ಪರೀಕ್ಷೆ ನಡೆಸದೆ ಬಿಟ್ಟುಕೊಡಲು ಒಪ್ಪಲಿಲ್ಲ. ಈ ಬಗ್ಗೆ ಗೊಂದಲ ಉಂಟಾದ ಕಾರಣ ಮಾಜಿ ಶಾಸಕ ಮೊದಿನ್‌ ಬಾವಾ ಅವರು ಸ್ಥಳಕ್ಕೆ ಆಗಮಿಸಿ ಬಾಲಕನ ಅಂತ್ಯಕ್ರಿಯೆಗೆ ಬೇಕಾದ ವ್ಯವಸ್ಥೆ ಮಾಡಿಕೊಟ್ಟರು.

See also  ಕಾರವಾರ: ಸರಕಾರದ ಸೌಲಭ್ಯ ಜನರಿಗೆ ತಲುಪಿಸಿ ಎಂದ ಸಚಿವ ಕೋಟ ಶ್ರೀನಿವಾಸ ಪೂಜಾರಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು