News Kannada
Wednesday, February 08 2023

ಮಂಗಳೂರು

ಮಂಚಿಯಲ್ಲಿ ಅಗ್ನಿ ಅವಘಡ: ಅಕೇಶಿಯಾ‌ ಮರ, ಕಟ್ಟಿಗೆ ರಾಶಿ ಬೆಂಕಿಗಾಹುತಿ

Fire breaks out in Manchi, acacia tree, wood piles gutted in fire
Photo Credit : News Kannada

ಮಣಿಪಾಲ: 80 ಬಡಗಬೆಟ್ಟು ಗ್ರಾಮದ ಮಂಚಿ ರಾಜೀವನಗರದ ಮೀಸಲು ಅರಣ್ಯ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಕಾಡಿನಲ್ಲಿ ಹತ್ತಿಕೊಂಡ ಬೆಂಕಿಯ ಕೆನ್ನಾಲಿಗೆ ಇಡೀ ಸುತ್ತಮುತ್ತಲಿನ ಪರಿಸರಕ್ಕೆ ವ್ಯಾಪಕವಾಗಿ ಹರಡಿದೆ. ಇದರಿಂದ ಸುತ್ತಮುತ್ತ ಪರಿಸರದಲ್ಲಿ ಕೆಲಕಾಲ ದಟ್ಟ ಹೊಗೆ ಆವರಿಸಿಕೊಂಡಿತ್ತು. ರಾಜೀವನಗರದ ರತ್ನ‌ ಆಚಾರ್ಯ ಅವರ ಹಡಿಲು ಗದ್ದೆಯ ಹುಲ್ಲು ಗಾವಲು, ಮನೆಯೊಂದರ ಬಳಿ ರಾಶಿ ಹಾಕಿದ್ದ ಕಟ್ಟಿಗೆಯ ರಾಶಿ, ಕಾಡಿನ ಅಕೇಶಿಯ ಮರಗಳು ಬೆಂಕಿಗೆ ಆಹುತಿಯಾಗಿವೆ.

ಮೊದಲಿಗೆ ಕಾಡಿನಲ್ಲಿ‌ ಕಾಣಿಸಿಕೊಂಡ ಬೆಂಕಿಯ ಸಣ್ಣ ಕಿಡಿ, ನೋಡು ನೋಡುತ್ತಿದ್ದಂತೆ ವ್ಯಾಪಕವಾಗಿ ಹರಡಿದೆ. ರಾಜೀವನಗರದ 6ನೇ ಅಡ್ಡ ರಸ್ತೆಯ ಬಳಿಯ ಎರಡು ಎಕರೆಯಷ್ಟು ವ್ಯಾಪ್ತಿಯಲ್ಲಿ ಬೆಂಕಿ ಅಟ್ಟಹಾಸ ಮೆರೆದಿದೆ. ಕೂಡಲೇ ಎಚ್ಚೆತ್ತ ಸ್ಥಳೀಯರು ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ‌ ನಂದಿಸಿದರು. ಇದರಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

See also  ಬೆಳ್ತಂಗಡಿ: ಅಭಿನಯ ಕಾರ್ಯಾಗಾರ ಸಮಾರಂಭ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು