News Kannada
Friday, January 27 2023

ಮಂಗಳೂರು

ಬಂಟ್ವಾಳ : ಮಾಣಿಯ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ತರಬೇತಿ ಕಾರ್ಯಾಗಾರ

Photo Credit : News Kannada

ಬಂಟ್ವಾಳ : ರಸ್ತೆ, ಮೋರಿ ಮೊದಲಾದ ಅಭಿವೃದ್ಧಿ ಪರ ಚಿಂತನೆಗಳು ಬೇಡ, ಲವ್ ಜಿಹಾದ್ ತಡೆಗಟ್ಟಲು ಬಿಜೆಪಿಗೆ ಮತ ನೀಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡುತ್ತಾರೆ ಎಂದಾದರೆ ಇದು ಬಿಜೆಪಿಯ ದಿವಾಳಿತನಕ್ಕೆ ಸಾಕ್ಷಿಯಾಗಿದೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು.

ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ರಾಜೀವ್ ಗಾಂಧಿ ಪಂಚಾಯತ್ ರಾಜ್ ಘಟಕ ಇದರ ವತಿಯಿಂದ ಮಂಗಳವಾರ ಮಾಣಿಯ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಮತೀಯವಾದದ ಮೂಲಕ ಜನರನ್ನು ಒಡೆದು ಆಳುವ ನೀತಿಯನ್ನು ಮಾಡುತ್ತಿರುವ ಬಿಜೆಪಿಗೆ ರಾಹುಲ್ ಗಾಂಧಿಯವರ ಭಾರತ್ ಜೋಡೋ ಕಾರ್ಯಕ್ರಮವು ಸ್ಪಷ್ಟ ಉತ್ತರವನ್ನು ನೀಡುತ್ತಾ ಬಂದಿದೆ. ಈಗಿದ್ದರೂ ನಾವು ಈ ತರಬೇತಿಯ ಅನುಭವವನ್ನು ಪಡೆದು ಚುನಾವಣಾ ಪ್ರಚಾರ ಕಾರ್ಯದಲ್ಲಿ ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಕರೆ ನೀಡಿದರು. ನಾಗೇಶ್ ಉದ್ಯಾವರ ಹಾಗೂ ಉಮಾನಾಥ ಶೆಟ್ಟಿ ತರಬೇತಿ ಶಿಬಿರವನ್ನು ನಡೆಸಿಕೊಟ್ಟರು.

ಕೆಪಿಸಿಸಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಪಿಯೂಸ್ ಎಲ್.ರೋಡ್ರಿಗಸ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ವಿ.ಪೂಜಾರಿ, ಅಲ್ಪ ಸಂಖ್ಯಾತ ಘಟಕಾದ್ಯಕ್ಷ ಅರ್ಷದ್ ಸರವು, ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಝ್ ಬಡಕಬೈಲ್ ಪಕ್ಷ ಪ್ರಮುಖರಾದ ಬಿ.ಎಂ.ಅಬ್ಬಾಸ್ ಅಲಿ, ಮುರಳೀಧರ ರೈ, ಕೆ.ಪದ್ಮನಾಭ ರೈ, ಸಂದೇಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

See also  ಬೆಳ್ತಂಗಡಿ: ಚಾರ್ಮಾಡಿ ಘಾಟಿ ತಿರುವಿನಲ್ಲಿ ಆಂಬುಲೆನ್ಸ್- ಆಟೋ ರಿಕ್ಷಾ ಡಿಕ್ಕಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು