News Kannada
Saturday, February 04 2023

ಮಂಗಳೂರು

ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಕಡೇಶಿವಾಲಯ ಸ.ಪ್ರೌಢಶಾಲೆಯ ವಿಜ್ಞಾನ ಮಾದರಿ ಆಯ್ಕೆ

Photo Credit : By Author

ಪುತ್ತೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಧಾರವಾಡದ ರಾಯಪುರದಲ್ಲಿ ನಡೆದ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಕಡೇಶಿವಾಲಯ ಸರಕಾರಿ ಪ್ರೌಢಶಾಲೆಯ ೧೦ನೇ ತರಗತಿ ವಿದ್ಯಾರ್ಥಿ ಯಶವಂತರವರು ಬಹು ಉಪಯೋಗಿ ಕೃಷಿ ಯಂತ್ರದ ಅನ್ವೇಷಣೆಯ ಮಾದರಿಯಲ್ಲಿ ವಿಜೇತರಾಗಿ ಕೇರಳದ ತ್ರಿಶೂರ್ನಲ್ಲಿ ಜ. ೨೭ರಿಂದ ೩೧ರವರೆಗೆ ನಡೆಯುವ ದಕ್ಷಿಣ ಭಾರತ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಆಯ್ಕೆಯಾಗಿದ್ದಾರೆ.

ಬಂಟ್ವಾಳ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಪ್ರಥಮ ಹಾಗೂ ಬಂಟ್ವಾಳ ಮೊಡಂಕಾಪು ಕಾರ್ಮೆಲ್ ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಪ್ರಥಮ ಸ್ಥಾನಗಳಿಸಿದ್ದರು. ಇವರಿಗೆ ಗಣಿತ ಶಿಕ್ಷಕಿ ಗೀತಾಕುಮಾರಿ ಮಾರ್ಗದರ್ಶನ ನೀಡಿದ್ದಾರೆ.

ಇವರು ಬಂಟ್ವಾಳ ತಾಲೂಕು ಕಡೇಶಿವಾಲಯ ಗ್ರಾಮದ ಕೆಮ್ಮಾನು ನಿವಾಸಿ ಲೋಕೇಶ ಮತ್ತು ಪವಿತ್ರ ದಂಪತಿಯ ಪುತ್ರರಾಗಿದ್ದಾರೆ.

See also  ಹೊಸದಿಲ್ಲಿ: ಕೇಜ್ರಿವಾಲ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು