News Kannada
Friday, February 03 2023

ಮಂಗಳೂರು

ಮಂಗಳೂರು: ಕಲಾ ಸವ್ಯಸಾಚಿ ಪ್ರಶಾಂತ್ ಸಿ.ಕೆ.ಗೆ ಕುಂದೇಶ್ವರ ಸಮ್ಮಾನ್‌ ಪ್ರಶಸ್ತಿ

Kundeshwara Samman for Kala Sabyasachi Prashanth C.K.
Photo Credit : By Author
ಮಂಗಳೂರು: ಕಾರ್ಕಳ ಹಿರ್ಗಾನ ಕ್ಷೇತ್ರದಿಂದ ಪ್ರತಿ ವರ್ಷ ನೀಡಲಾಗುವ ಶ್ರೀ ಕುಂದೇಶ್ವರ ಸಮ್ಮಾನ್‌ ಪ್ರಶಸ್ತಿಗೆ ಬಹುಮುಖ ಪ್ರತಿಭೆಯ ಯಕ್ಷ ಕಲಾವಿದ, ರಂಗದ ಬಿರ್ಸೆ ಪ್ರಶಾಂತ್‌ ಸಿ.ಕೆ. ಆಯ್ಕೆಯಾಗಿದ್ದಾರೆ. ಜ.21ರಂದು ನಡೆಯುವ ಶ್ರೀ ಕುಂದೇಶ್ವರ ಜಾತ್ರೆಯ ಸಂದರ್ಭ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಯಕ್ಷಗಾನ ವೃತ್ತಿಪರ ಮೇಳದಲ್ಲಿ ಹಾಸ್ಯ ಕಲಾವಿದರಾಗಿರುವ ಪ್ರಶಾಂತ್‌ ಸಿ.ಕೆ. ಅವರು, ಅನೇಕ ಯಕ್ಷಗಾನ ಪ್ರಸಂಗ, ತುಳು ನಾಟಕಗಳನ್ನು ರಚಿಸಿದ್ದಾರೆ. ಸಿನಿಮಾ ರಂಗದಲ್ಲಿ ದಾಖಲೆ ನಿರ್ಮಿಸಿದ ಕಾಂತಾರದಲ್ಲಿ ನಟಿಸಿದ್ದು, ಯಕ್ಷಗಾನ ಆಧಾರಿತ ವದನ ಕಲಾತ್ಮಕ ಚಿತ್ರದಲ್ಲಿ ಪ್ರಧಾನ ಭೂಮಿಕೆಯಲ್ಲಿದ್ದಾರೆ.
ರಾಷ್ಟ್ರಪ್ರಶಸ್ತಿ ವಿಜೇತ ಪಿಂಗಾರ ಸಿನಿಮಾದಲ್ಲಿ ದೈವಪಾತ್ರಧಾರಿಯಾಗಿ ಅಭಿನಯಿಸಿದ್ದು, ಟಿವಿ ವಾಹಿನಿಗಳಲ್ಲಿ ಹಾಸ್ಯ ಸರಣಿಗಳು, ಯಕ್ಷ ರಸ ಮೊದಲಾದ ಹಾಸ್ಯ ಯಕ್ಷಗಾನ ಪ್ರಸಂಗಗಳನ್ನು ನಿರ್ದೇಶಿಸಿ ಅಭಿನಯಿಸುತ್ತಿದ್ದಾರೆ. ವೃತ್ತಿಪರ ಮೇಳಗಳಲ್ಲಿದ್ದು ಅನೇಕ ತಿರುಗಾಟ ಮಾಡಿರುವ ಸಿ.ಕೆ. ಅವರು ತುಳು ರಂಗಭೂಮಿಯ ಅನರ್ಘ್ಯ ರತ್ನ. ಅವರ ಬಹುಮುಖ ಪ್ರತಿಭೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಾಂಸ್ಕೃತಿಕ ಕಾರ್ಯಕ್ರಮ ಸಂಯೋಜಕ ಜಿತೇಂದ್ರ ಕುಂದೇಶ್ವರ ತಿಳಿಸಿದ್ದಾರೆ.
ಶನಿವಾರ ರಾತ್ರಿ 7 ಗಂಟೆಗೆ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ಹಿರಣ್ಯಾಕ್ಷ -ಹಿರಣ್ಯ ಕಶಿಪು ತುಳು ಮತ್ತು ಕನ್ನಡ ಯಕ್ಷಗಾನ ಪ್ರದರ್ಶನ ಗೊಳ್ಳಲಿದೆ. ದೈವಮಹಿಮೆ ಸಾರುವ ಮಾಯದಪ್ಪೆ ಮಂತ್ರದೇವತೆ ತುಳು ನಾಟಕ ನಡೆಯಲಿದೆ.
ಜ.22ರಂದು ವರ್ಷಾವಧಿ ಮಹೋತ್ಸವ, ಅನ್ನಸಂತರ್ಪಣೆ, ನೇಮೋತ್ಸವ ನಡೆಯಲಿದೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.
See also  ಮಂಗಳೂರು: ವಿಶೇಷ ಮಕ್ಕಳೊಂದಿಗೆ ಕ್ರಿಸ್ಮಸ್ ವಿಶೇಷ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

11671
Media Release

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು