News Kannada
Friday, February 03 2023

ಮಂಗಳೂರು

ವಿಶ್ವ ಕೊಂಕಣಿ ಕೇಂದ್ರವು ಕೊಡಮಾಡುವ ಅಖಿಲ ಭಾರತ ಮಟ್ಟದ ಕೊಂಕಣಿ ಸಾಹಿತ್ಯ ಪ್ರಶಸ್ತಿ ಪ್ರಕಟ

All India Konkani Sahitya Puraskar announced by World Konkani Centre
Photo Credit : News Kannada

ಮಂಗಳೂರು: ಮಂಗಳೂರಿನ ವಿಶ್ವ ಕೊಂಕಣಿ ಕೇಂದ್ರವು ಕೊಡಮಾಡುವ ಅಖಿಲ ಭಾರತ ಮಟ್ಟದ ಕೊಂಕಣಿ ಸಾಹಿತ್ಯ ಪ್ರಶಸ್ತಿ ವಿಮಲಾ ವಿ. ಪೈ ವಿಶ್ವ ಕೊಂಕಣಿ ಸಾಹಿತ್ಯ ಪುರಸ್ಕಾರ-2021, ವಿಮಲಾ ವಿ. ಪೈ ವಿಶ್ವ ಕೊಂಕಣಿ ಕವಿತಾ ಕೃತಿ ಪುರಸ್ಕಾರ-2021 ಮತ್ತು ವಿಮಲಾ ವಿ. ಪೈ ವಿಶ್ವ ಕೊಂಕಣಿ ಜೀವನ ಸಿದ್ಧಿ ಸಮ್ಮಾನ-2022ಗಳನ್ನು ಪ್ರಕಟಿಸಲಾಗಿದೆ.

ವರ್ಷದ ಅತ್ಯುತ್ತಮ ಸಾಹಿತ್ಯ ಪುರಸ್ಕಾರ 2022ಕ್ಕೆ ಗೋವಾದ ಡಾ| ಜಯಂತಿ ನಾಯ್ಕ ರಚಿಸಿದ ಕೊಂಕಣಿ ದೀರ್ಘ ಕತೆಗಳ ಸಂಕಲನ ತಿಚಿ ಕಾಣಿ (ಅವಳ ಕತೆ), ವರ್ಷದ ಅತ್ಯುತ್ತಮ ಕವಿತಾ ಕೃತಿ ಪುರಸ್ಕಾರ 2022ಕ್ಕೆ ಮುಂಬಯಿಯ ವಲ್ಲಿ ಕ್ವಾಡ್ರಸ್ ಅವರ ಕವಿತಾ ಸಂಕಲನ ಭಿತರಲೊ (ಆಂತರ್ಯದ ಕವಿ)ಕವಿ ಆಯ್ಕೆಯಾಗಿವೆ.

ಜೀವನ ಸಿದ್ದಿ ಸಮ್ಮಾನ 2022ಕ್ಕೆ ಹಿರಿಯ ಕೊಂಕಣಿ ಮುಂದಾಳುಬಿ ಮಾಣಿಕ್ ರಾವ್ ಗವಣೇಕರ್ ಅವರನ್ನು ಕೊಂಕಣಿ ಭಾಷೆ, ಸಾಹಿತ್ಯಕ್ಕೆ ನೀಡಿದ ಅಪಾರ ಕೊಡುಗೆಯನ್ನು ಪರಿಗಣಿಸಿ ಆಯ್ಕೆ ಮಾಡಲಾಗಿದೆ. 1 ಲಕ್ಷ ರೂ. ಸಮ್ಮಾನ ಧನ ಮತ್ತು ಪ್ರಶಸ್ತಿ ಫಲಕಗಳನ್ನು ಹೊಂದಿರುವ ಈ ಪ್ರಶಸ್ತಿಗಳನ್ನು ದಾನಿ ಟಿ.ವಿ. ಮೋಹನದಾಸ ಪೈ ಅವರ ಅಮ್ಮ ವಿಮಲಾ ಪೈ ಹೆಸರಿನಲ್ಲಿ ಆಯೋಜನೆ ಮಾಡಿದ್ದಾರೆ.

ಫೆಬ್ರವರಿ 9ರಂದು ಬೆಳಗ್ಗೆ 10 ಗಂಟೆಗೆ ವಿಶ್ವ ಕೊಂಕಣಿ ಕೇಂದ್ರದಲ್ಲಿ ಜರಗಲಿರುವ ವಾರ್ಷಿಕ ವಿಶ್ವ ಕೊಂಕಣಿ ಪುರಸ್ಕಾರ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನಿಸಲಾಗುವುದು. ಈ ಪ್ರಶಸ್ತಿಗಳನ್ನು ಎರಡು ಸ್ತರದ ಪ್ರಕ್ರಿಯೆಯಲ್ಲಿ ಆಯ್ಕೆ ಮಾಡಲಾಗಿದ್ದು, ಪ್ರಾಥಮಿಕ ಸ್ತರದ ಆಯ್ಕೆ ಮಂಡಳಿಯ 16 ಸದಸ್ಯರ ನಾಮನಿರ್ದೇಶನದ ಆಧಾರದಲ್ಲಿ 5 ಸದಸ್ಯರ ಪರಿವೀಕ್ಷಕ ಮಂಡಳಿಯು ಅಂತಿಮ ಆಯ್ಕೆ ನಡೆಸುತ್ತದೆ. 2022ನೇ ಸಾಲಿನ ಪರಿವೀಕ್ಷಕ ಮಂಡಳಿಯಲ್ಲಿ ಉದಯ ಬೆಂಬ್ರೆ, ಡಾ| ಕಿರಣ್, ಪಯ್ಯನೂರು ರಮೇಶ ಪೈ, ಮೆಲ್ವಿನ್ ರಾಡ್ರಿಗಸ್, ಗೋಕುಲದಾಸ ಪ್ರಭು ಸದಸ್ಯರಾಗಿದ್ದಾರೆ.

1996ನೇ ಇಸವಿಯಲ್ಲಿ ವಿಶ್ವ ಕೊಂಕಣಿ ಸರದಾರ ಬಸ್ತಿ ವಾಮನ ಶೆಣೈ ಅವರ ನೇತೃತ್ವದಲ್ಲಿ ಪ್ರಾರಂಭವಾದ ಕೊಂಕಣಿ ಭಾಸ್ ಆನಿ ಸಂಸ್ಕೃತಿ ಪ್ರತಿಷ್ಠಾನವು ವಿಶ್ವ ಕೊಂಕಣಿ ಕೇಂದ್ರವನ್ನು ಸ್ಥಾಪಿಸಿದ್ದು ಕೊಂಕಣಿ ಭಾಷೆ, ಸಾಹಿತ್ಯ, ಸಂಸ್ಕೃತಿಯ ಅಭಿವೃದ್ಧಿಗಾಗಿ ಹಾಗೂ ಕೊಂಕಣಿ ಸಮುದಾಯಗಳ ಸರ್ವಾಂಗೀಣ ಬೆಳವಣಿಗೆಗಾಗಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷ ನಂದಗೋಪಾಲ ಶೆಣೈ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

See also  ಬೆಳ್ತಂಗಡಿ: ಆತ್ಮಹತ್ಯೆಗೆ ಶರಣಾದ ನೆರಿಯ ಗ್ರಾಮದ ಗಂಡಿಬಾಗಿಲು ನಿವಾಸಿ ಡೋಮಿನಿಕ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು