News Kannada
Tuesday, February 07 2023

ಮಂಗಳೂರು

ಉಚ್ಚಿಲ: ಮುಳುಗಿದ ಚೀನಾ ಹಡಗಿನಿಂದ ತೈಲ ತೆರವು ಕಾರ್ಯ ಶುರು!

Ullal: Oil clearance operation begins from chinese ship that sank in Uchila
Photo Credit : News Kannada

ಉಳ್ಳಾಲ: ಸೋಮೇಶ್ವರ ಉಚ್ಚಿಲ ಕಡಲ ತೀರದಲ್ಲಿ ಚೀನಾದ ಹಡಗು ಮುಳುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಬರೋಬ್ಬರಿ ಆರು ತಿಂಗಳ ಬಳಿಕ ಹಡಗಿನ ತೈಲ ತೆರವು ಕಾರ್ಯ ಆರಂಭವಾಗಿದೆ.

ಸರಕು ಹಡಗಿನಲ್ಲಿದ್ದ ಸುಮಾರು 220 ಟನ್‌ ತೈಲ ತೆರವು ಕಾರ್ಯ ನಡೀತಾ ಇದ್ದು, ಚೀನದಿಂದ ಲೆಬನಾನ್‌ಗೆ 8 ಸಾವಿರ ಟನ್‌ ತೂಕದ ಸ್ಟೀಲ್‌ ಕಾಯಿಲ್‌ ಸಾಗಿಸುತ್ತಿದ್ದ ಹಡಗು ಇದಾಗಿತ್ತು‌. 2022ರ ಜೂನ್ 21ರಂದು ಉಳ್ಳಾಲದ ಬಟ್ಟಪಾಡಿ ಬಳಿ ಮುಳುಗಿದ್ದ ಪ್ರಿನ್ಸೆಸ್‌ ಮಿರಾಲ್‌ ಹಡಗು ಮುಳುಗಡೆಯಾಗಿತ್ತು. ಸದ್ಯ ಗುಜರಾತ್‌ ಮೂಲದ ಬನ್ಸಲ್‌ ಎಂಡೆವರ್ಸ್‌ ಸಂಸ್ಥೆಗೆ ತೈಲ ತೆರವು ಗುತ್ತಿಗೆ ನೀಡಲಾಗಿದೆ‌‌. 160 ಟನ್‌ ಫರ್ನೆಸ್‌ ಆಯಿಲ್‌, 60 ಟನ್‌ ಡೀಸೆಲ್‌ ಸೇರಿದಂತೆ 220 ಟನ್‌ ತೈಲ ಇದರಲ್ಲಿದೆ‌. ಹೋಸ್‌ಪೈಪ್‌ ಅಳವಡಿಸಿ ವ್ಯಾಕ್ಯೂಂ ಪಂಪ್‌ ಮೂಲಕ ತೈಲವನ್ನು ಹೊರಕ್ಕೆಳೆಯುವ ಕಾರ್ಯ ಆರಂಭವಾಗಿದೆ. 320 ಟನ್‌ ಸಾಮರ್ಥ್ಯದ ಬಂಕರ್‌ ಬಾರ್ಜ್‌ ಮೂಲಕ ತೈಲವನ್ನು ಪೂರ್ಣ ವರ್ಗಾಯಿಸಿ ಹಳೆಬಂದರಿಗೆ ತರಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.

ಅಕ್ಟೋಬರ್‌ನಲ್ಲಿ ಯುಎಇಗೆ ಸೇರಿದ ಮೊಂಜಾಸಾ ಡಿಎಂಸಿಸಿ ಎಂಬ ಕಂಪೆನಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ ತನಗೆ ಶಿಪ್‌ ಬಂಕರಿಂಗ್‌ ಕಾರ್ಯಕ್ಕಾಗಿ ಬರಬೇಕಾದ 1,71,301 ಅಮೆರಿಕನ್‌ ಡಾಲರ್‌ (ಸುಮಾರು 1.39 ಕೋಟಿ ರೂ.) ಮೊತ್ತ ಬಂದಿಲ್ಲ ಎಂದಿತ್ತು. ಅದು ಬರುವವರೆಗೆ ಈ ಹಡಗನ್ನು ತಡೆಹಿಡಿಯುವಂತೆ ಕೋರಿತ್ತು. ಅದನ್ನು ಹೈಕೋರ್ಟ್‌ ಮಾನ್ಯ ಮಾಡಿದ್ದ ಹಿನ್ನೆಲೆ ದ.ಕ ಜಿಲ್ಲಾಡಳಿತಕ್ಕೆ ಹಿನ್ನೆಡೆಯಾಗಿತ್ತು. ಬಳಿಕ ಜಿಲ್ಲಾಡಳಿತ ಹೈಕೋರ್ಟ್‌ಗೆ ಪರಿಸರ ಮಾಲಿನ್ಯ ಭೀತಿ ಹಿನ್ನೆಲೆ ತೈಲ ತೆರವಿಗೆ ಅರ್ಜಿ ಸಲ್ಲಿಸಿತ್ತು. ಇದೀಗ ತೈಲ ತೆರವಿಗೆ ಹೈಕೋರ್ಟ್ ಅನುಮತಿ ಹಿನ್ನೆಲೆ ತೈಲ ತೆರವು ಆರಂಭವಾಗಿದೆ. ಸುಮಾರು 15 ದಿನಗಳ ಕಾಲ ನಡೆಯಲಿರುವ ತೈಲ ತೆರವು ಕಾರ್ಯಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿ, ಪೊಲೀಸ್‌ ಇಲಾಖೆ ಮತ್ತು ಕೋಸ್ಟ್‌ಗಾರ್ಡ್‌ನಿಂದ ನಿರಾಕ್ಷೇಪಣ ಪತ್ರ (ಎನ್‌ಒಸಿ) ಪಡೆಯಲಾಗಿದೆ.

See also  ಗುಜರಾತ್: ಮೂರು ಪ್ರತ್ಯೇಕ ಅಪಘಾತಗಳಲ್ಲಿ 6 ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು