ಮಂಗಳೂರು: 1.11 ಕೋಟಿ ರೂಪಾಯಿ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಕದ್ರಿ ಪದವು 22ನೇ ವಾರ್ಡಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರಾದ ಡಾ. ವೈ. ಭರತ್ ಶೆಟ್ಟಿ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮೇಯರ್ ಜಯಾನಂದ್ ಅಂಚನ್, ಬೂತ್ ಅಧ್ಯಕ್ಷರುಗಳಾದ ಹರಿಪ್ರಸಾದ್, ಉಮೇಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್, ವಿವೇಕಾನಂದ, ಬಿಜೆಪಿ ಯುವಮೋರ್ಚಾ ಉತ್ತರ ಮಂಡಲದ ಪ್ರಧಾನ ಕಾರ್ಯದರ್ಶಿ ಸಂಜಿತ್ ಶೆಟ್ಟಿ, ಉತ್ತರ ಮಂಡಲ ಅಲ್ಪ ಸಂಖ್ಯಾತ ಮೋರ್ಚಾದ ಅಧ್ಯಕ್ಷರಾದ ಶಾನ್ವಾಜ್, ಕಾವೂರು ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ಶೆಟ್ಟಿ, ಶಕ್ತಿಕೇಂದ್ರದ ಅಧ್ಯಕ್ಷ ರವೀಂದ್ರ ಪಂಪ್ವೆಲ್, ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸೇವಂತಿ ಶ್ರೀಯಾನ್, ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.