News Kannada
Monday, February 06 2023

ಮಂಗಳೂರು

ಮೂಡುಬಿದಿರೆ: ಅಂಬೇಡ್ಕರ್ ಭವನಕ್ಕೆ ಶಿಲಾನ್ಯಾಸ

Moodbidri: Foundation stone laid for Ambedkar Bhavan
Photo Credit : News Kannada

ಮೂಡುಬಿದಿರೆ: 1500 ಅಂಬೇಡ್ಕರ್ ಭವನಗಳು ಸೂಕ್ತ ರೀತಿಯಲ್ಲಿ ನಿರ್ವಹಣೆಯಿಲ್ಲದಿರುವುದರಿಂದ ಅವುಗಳನ್ನು ಗ್ರಂಥಾಲಯವಾಗಿ ಪರಿವರ್ತಿಸಲು ಈಗಾಗಲೇ ಆದೇಶಿಸಲಾಗಿದೆ. ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳ ಉನ್ನತ ವ್ಯಾಸಂಗ ಪಡೆಯಲು ಸರ್ಕಾರ ಹಲವಾರು ಯೋಜನೆಗಳನ್ನು ತಂದಿದೆ ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಮೂಡುಬಿದಿರೆ ಕಡಲಕೆರೆ ಬಳಿ ಸುಮಾರು 6 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಅಂಬೇಡ್ಕರ್ ಭವನಕ್ಕೆ ಭಾನುವಾರ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.

ಶಾಸಕ ಉಮಾನಾಥ ಕೋಟ್ಯಾನ್ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿ, ಅಂಬೇಡ್ಕರ್ ಅವರ ಜೀವನ, ಚಿಂತನೆಯನ್ನು ಒಳಗೊಳ್ಳುವ ಸುಸಜ್ಜಿತ ಭವನ, ಪಾರ್ಕ್ ಎರಡುವರೆ ಎಕರೆಯಲ್ಲಿ ನಿರ್ಮಾಣಗೊಳ್ಳಲಿದೆ. ಈಗಾಗಲೇ ಸರ್ಕಾರದಿಂದ 2 ಕೋಟಿ ರೂ. ಹಣ ಮಂಜೂರಾಗಿದೆ ಎಂದರು.

ಪುರಸಭೆ ಅಧ್ಯಕ್ಷ ಪ್ರಸಾದ್ ಕುಮಾರ್, ಉಪಾಧ್ಯಕ್ಷೆ ಸುಜಾತ, ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ ಪೂಜಾರಿ, ಮೂಡಾ ಮಾಜಿ ಅಧ್ಯಕ್ಷ ಮೇಘನಾದ್ ಶೆಟ್ಟಿ, ಬಿಜೆಪಿ ದ.ಕ ಜಿಲ್ಲಾಧ್ಯಕ್ಷ ಸುದರ್ಶನ್ ಎಂ., ದ.ಕ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸಿದ್ದಲಿಂಗೇಶ ಬೇವಿನಮಟ್ಟಿ, ಸಹಾಯಕ ನಿರ್ದೇಶಕ ಸುರೇಶ್ ಉಪಸ್ಥಿತರಿದ್ದರು, ಗಣೇಶ್ ಅಳಿಯೂರು ಕಾರ್ಯಕ್ರಮ ನಿರೂಪಿಸಿದರು.

See also  ಮಂಗಳೂರು: ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣಜನ್ಮಾಷ್ಟಮಿ ಹಾಗೂ ಲಕ್ಷ ತುಳಸೀ ಅರ್ಚನೆ ಸಂಪನ್ನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು