News Kannada
Thursday, February 02 2023

ಮಂಗಳೂರು

ಸುರತ್ಕಲ್: ಬಾಳದಲ್ಲಿ ನವವಿವಾಹಿತೆ ಆತ್ಮಹತ್ಯೆ

Newly-wed woman commits suicide
Photo Credit : News Kannada

ಸುರತ್ಕಲ್: ಪೊಲೀಸ್ ಠಾಣಾ ವ್ಯಾಪ್ತಿಯ ಬಾಳ ಒಟ್ಟೆ ಕಾಯರ್ ಎಂಬಲ್ಲಿ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಉಳ್ಳಾಲ ಕೋಟೆಕಾರ್ ಮಾಡೂರು ನಿವಾಸಿ ಚಂದ್ರಶೇಖರ-ಗಿರಿಜಾ ದಂಪತಿ ಪುತ್ರಿ ದಿವ್ಯಾ(26) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈಕೆ ಒಂದೂವರೆ ವರ್ಷದ ಹಿಂದಷ್ಟೇ ಒಟ್ಟೆಕಾಯರ್ ನಿವಾಸಿ ಹರೀಶ್ ಎಂಬವರನ್ನು ಮದುವೆಯಾಗಿದ್ದರು.

ದಂಪತಿ ಶನಿವಾರ ನೆರೆಮನೆಯಲ್ಲಿ ಜರುಗಿದ ಕಾರ್ಯಕ್ರಮವೊಂದಕ್ಕೆ ತೆರಳಿದ್ದರು. ಈ ವೇಳೆ ಜಗಳ ನಡೆದಿದ್ದು ದಿವ್ಯಾ ಬೇಸರಗೊಂಡು ವಾಪಸ್ ಮನೆಗೆ ಬಂದಿದ್ದರು. ಇದರಿಂದ ನೊಂದಿದ್ದ ದಿವ್ಯಾ ನಿನ್ನೆ ಸಂಜೆ ಬೆಡ್ ರೂಮ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸುರತ್ಕಲ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಸಹಾಯವಾಣಿಗೆ ಕರೆ ಮಾಡಿ:

ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು

See also  ದಿನನಿತ್ಯ ಜೀವನದಲ್ಲಿ ಯೋಗ ಅಭ್ಯಾಸವನ್ನು ಅಳವಡಿಸಿಕೊಳ್ಳಿ: ತಾರಾಅನೂರಾಧ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು