News Kannada
Friday, February 03 2023

ಮಂಗಳೂರು

ಪುತ್ತೂರು: ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವನೆ ಬೆಳೆಸಿಕೊಳ್ಳಬೇಕು -ಗಿರೀಶ್ ನಂದನ್

Students should develop a competitive spirit: Girish Nandan
Photo Credit : News Kannada

ಪುತ್ತೂರು: ಸ್ಪರ್ಧಾ ಮನೋಭಾವನೆ ಬೆಳೆಸಿಕೊಂಡು ಎಲ್ಲಾ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಬೇಕು. ಜತೆಗೆ ರಾಷ್ಟ್ರಭಕ್ತಿಯನ್ನು ಹೆಚ್ಚಿಸಿಕೊಂಡು ಬೆಳೆಯಬೇಕು ಎಂದು ಪುತ್ತೂರು ವಿಭಾಗದ ಸಹಾಯಕ ಆಯುಕ್ತ ಗಿರೀಶ್ ನಂದನ್ ಹೇಳಿದರು.

ಅವರು ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ಜಂಟಿ ಆಶ್ರಯದೊಂದಿಗೆ 74ನೇ ಗಣರಾಜ್ಯೋತ್ಸವದ ಪ್ರಯುಕ್ತ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ವಿವಿಧ ಸ್ಪರ್ಧೆಗಳನ್ನು ಉದ್ಘಾಟಿಸಿ ಶುಕ್ರವಾರ ಮಾತನಾಡಿದರು.

ಅತಿಥಿಯಾಗಿ ಆಗಮಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್ ಮಾತನಾಡಿ ಎಲ್ಲಾ ಸ್ಪರ್ಧೆಗಳು ಮಕ್ಕಳ ಬೆಳವಣಿಗೆಗೆ ಪೂರಕವಾಗಿರುತ್ತವೆ. ಮಕ್ಕಳು ಮುಂದಿನ ಜವಾಬ್ದಾರಿಯುತ ಪ್ರಜೆಗಳಾಗಬೇಕು. ಒಳ್ಳೆಯ ರಾಷ್ಟçವನ್ನು ನಿರ್ಮಾಣ ಮಾಡಬೇಕು. ವಿವೇಕಾನಂದರAತಹ ಮಹಾವ್ಯಕ್ತಿಗಳ ಜೀವನ ಚರಿತ್ರೆಯನ್ನು ಓದಿ ಸದೃಢ ದೇಶ ರೂಪಿಸಬೇಕು ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ ಮಕ್ಕಳಲ್ಲಿ ಪಠ್ಯದ ಜೊತೆ ಪಠ್ಯೇತರ ವಿದ್ಯಾ ಸಂಸ್ಥೆಗಳು ಶಿಕ್ಷಣದಲ್ಲಿ ಜಾಗೃತಿಯನ್ನು ಮೂಡಿಸಲು ವಿಫಲವಾದ ಕಾರಣ ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದೆ ಎಂದು ಅಭಿಪ್ರಾಯಪಟ್ಟರು.

ವೇದಿಕೆಯಲ್ಲಿ ಕ್ಷೇತ್ರ ಸಂಪನ್ಮೂಲ ಅಧಿಕಾರಿ ರತ್ನ ಕುಮಾರಿ ಪಿ.ಕೆ, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ನಟ್ಟೋಜ, ಅಂಬಿಕಾ ಸಿ.ಬಿ.ಎಸ್.ಇ ವಿದ್ಯಾಲಯದ ಪ್ರಾಂಶುಪಾಲೆ ಮಾಲತಿ ಡಿ. ಭಟ್ ಹಾಗೂ ಉಪಪ್ರಾಂಶುಪಾಲೆ ಸುಜನಿ ಬೋರ್ಕರ್ ಉಪಸ್ಥಿತರಿದ್ದರು.

ಶಿಕ್ಷಕಿಯರಾದ ಶ್ರುತಿ ಸ್ವಾಗತಿಸಿ, ರಮ್ಯಾ ವಂದಿಸಿದರು, ಶಿಕ್ಷಕಿ ಪ್ರಿಯಾಶ್ರೀ ಕೆ.ಎಸ್ ಕಾರ್ಯಕ್ರಮ ನಿರೂಪಿಸಿದರು.

See also  ಮಂಗಳೂರು:  ಗ್ಯಾಸ್ ಸಿಲಿಂಡರ್ ವಿತರಣೆ, ಹೆಚ್ಚುವರಿ ಹಣ ನೀಡದಂತೆ ಸೂಚನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು