News Kannada
Friday, February 03 2023

ಮಂಗಳೂರು

ಪ್ರಜಾಪ್ರಭುತ್ವದಲ್ಲಿ ಅತ್ಯಂತ ಪ್ರಮುಖ ವ್ಯಕ್ತಿ ಮತದಾರ ಪ್ರಭು: ಡಿಸಿ ರವಿಕುಮಾರ್

Voter Prabhu is the most important person in a democracy: DC Ravikumar
Photo Credit : News Kannada

ಮಂಗಳೂರು:- ಪ್ರಜಾಪ್ರಭುತ್ವದಲ್ಲಿ ಅತ್ಯಂತ ಪ್ರಮುಖ ವ್ಯಕ್ತಿ ಮತದಾರ ಪ್ರಭು. ನಮ್ಮ ಜಿಲ್ಲೆ, ನಮ್ಮ ಕ್ಷೇತ್ರಗಳಲ್ಲಿರುವ ಮೂಲಭೂತ ಸಮಸ್ಯೆಗಳ ನಿವಾರಣೆಗೆ ಶ್ರಮಿಸುವ ಅರ್ಹ ಜನಪ್ರತಿನಿಧಿಯನ್ನು ಆಯ್ಕೆ ಮಾಡಲು ಪ್ರಜಾಪ್ರಭುತ್ವ ನಮಗೆ ನೀಡಿರುವ ಮತದಾನದ ಹಕ್ಕನ್ನು ಕಡ್ಡಾಯವಾಗಿ ಚಲಾಯಿಸುವಂತೆ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಕರೆ ನೀಡಿದರು.

ಅವರು ಜ.25ರ ಬುಧವಾರ ನಗರದ ಟೌನ್ ಹಾಲ್‌ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಾವು ವಾಸಮಾಡುವ ಪ್ರದೇಶದಲ್ಲಿರುವ ಮೂಲಭೂತ ಸಮಸ್ಯೆಗಳನ್ನು ನಿವಾರಿಸುವ, ಅಗತ್ಯ ಸೌಲಭ್ಯಗಳನ್ನು ಒದಗಿಸಲು ಶ್ರಮಿಸುವ ಅರ್ಹ ಜನಪ್ರತಿನಿಧಿಯನ್ನು ಚುನಾವಣೆಯಲ್ಲಿ ಆಯ್ಕೆ ಮಾಡಬೇಕು, ಅದಕ್ಕಾಗಿ ಮತದಾನದ ದಿನದಂದು ನಮ್ಮ ಹಕ್ಕನ್ನು ಚಲಾಯಿಸುವ ಮೂಲಕ ಸಂವಿಧಾನ ನಮಗೆ ನೀಡಿರುವ ಕರ್ತವ್ಯವನ್ನು ನಿಭಾಯಿಸಬೇಕು ಪ್ರಜಾಪ್ರಭುತ್ವದಲ್ಲಿ ಅತ್ಯಂತ ಪ್ರಮುಖ ವ್ಯಕ್ತಿಯಾಗಿರುವ ಮತದಾರ ಪ್ರಭು ಈ ಕಾರ್ಯವನ್ನು ಮರೆಯದೆ ನಿರ್ವಹಿಸಬೇಕು ಎಂದು ಅವರು ಸಲಹೆ ನೀಡಿದರು.

ಶೇಕಡ 37 ರಷ್ಟು ಯುವ ಮತದಾರರು ಇರುವ ಪ್ರಜಾಪ್ರಭುತ್ವ ದೇಶ ಭಾರತ. 18 ವರ್ಷ ತುಂಬಿದ ಪ್ರತಿಯೊಬ್ಬರು ತಮ್ಮ ಭವಿಷ್ಯದ ಹಾಗೂ ಪ್ರಜಾಪ್ರಭುತ್ವದ ಉಳಿವಿಗಾಗಿ ಸಂವಿಧಾನ ನೀಡಿರುವ ಹಕ್ಕನ್ನು ಚಲಾಯಿಸಬೇಕು ಮುಖ್ಯವಾಗಿ 18 ವರ್ಷ ತುಂಬಿದವರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊAಡು, ಚುನಾವಣಾ ಗುರುತಿನ ಚೀಟಿಯನ್ನು ಪಡೆದು ಚುನಾವಣೆಯಲ್ಲಿ ಮತದಾನದ ದಿನದಂದು ತಾವು ತಮ್ಮ ಕುಟುಂಬದವರು ಹಾಗೂ ಸ್ನೇಹಿತರೊಡನೆ ಬಂದು ಮತ ಚಲಾಯಿಸಿ ಉತ್ತಮ ಜನಪ್ರತಿನಿಧಿಯನ್ನು ಆಯ್ಕೆ ಮಾಡಿಕೊಳ್ಳಬೇಕು. ಮತದಾನದ ಹಕ್ಕು ಅತ್ಯಂತ ಶ್ರೇಷ್ಠವಾದದ್ದು ಎಂಬುದನ್ನು ಮರೆಯಬಾರದು ಎಂದರು.

ಪಶ್ಚಿಮ ವಲಯದ ಡಿಐಜಿ ಚಂದ್ರಗುಪ್ತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಮಂಗಳೂರು ತಹಶೀಲ್ದಾರ್ ಪ್ರಶಾಂತ್ ಪಾಟೀಲ್, ರಥ ಬೀದಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಜಯಕರ್ ಭಂಡಾರಿ ವೇದಿಕೆಯಲ್ಲಿದ್ದರು.

ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಸ್ವಾಗತಿಸಿದರು. ಸಹಾಯಕ ಆಯುಕ್ತ ಮದನ್ ಮೋಹನ್ ವಂದಿಸಿದರು.

ಕಾರ್ಯಕ್ರಮದಲ್ಲಿ 18 ವರ್ಷ ತುಂಬಿದ ನವ ಮತದಾರರಿಗೆ ಚುನಾವಣಾ ಗುರುತಿನ ಚೀಟಿಗಳನ್ನು ವಿತರಿಸಲಾಯಿತು ಹಾಗೂ ರಾಷ್ಟಿçÃಯ ಮತದಾರರ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಕ್ವಿಜ್, ಪ್ರಬಂಧ ಸೇರಿದಂತೆ ವಿವಿಧ ರೀತಿಯ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

See also  ಆಂಧ್ರಪ್ರದೇಶ: ನೀರಲ್ಲಿ ಮುಳುಗಿ 3 ವಿದ್ಯಾರ್ಥಿಗಳು ಸಾವು, ಇಬ್ಬರು ನಾಪತ್ತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು