News Kannada
Tuesday, February 07 2023

ಮಂಗಳೂರು

ಮಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರಿಂದ ಸಮಗ್ರ ಘನತ್ಯಾಜ್ಯ ನಿರ್ವಹಣಾ ಕೇಂದ್ರ ಉದ್ಘಾಟನೆ

Mangaluru: District in-charge minister inaugurates integrated solid waste management centre
Photo Credit : Facebook

ಮಂಗಳೂರು:  ಜಿಲ್ಲಾ ಪಂಚಾಯತ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಎಡಪದವು ಗ್ರಾಮ ಪಂಚಾಯತ್‌ನ ಸಂಯುಕ್ತಾಶ್ರಯದಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ನಿರ್ಮಾಣವಾದ ಸಮಗ್ರ ಘನತಾಜ್ಯ ನಿರ್ವಹಣಾ ಕೇಂದ್ರವನ್ನು ಇದೇ ಜ.26ರ ಗುರುವಾರ ಬೆಳಿಗ್ಗೆ 11 ಗಂಟೆಗೆ ತೆಂಕ ಎಡಪದವು ಎಂ.ಆರ್.ಎಫ್ ಕೇಂದ್ರದಲ್ಲಿ ಉದ್ಘಾಟಿಸಲಾಗುವುದು.

ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಎಂ.ಆರ್.ಎಫ್ ಘಟಕ ಉದ್ಘಾಟನೆ ಹಾಗೂ ಶಿಲಾಫಲಕ ಅನಾವರಣ ಮಾಡುವರು.

ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಎಸ್. ಅಂಗಾರ ಅವರು ಎಂ.ಆರ್.ಎಫ್. (ಸ್ವಚ್ಛ ವಾಹಿನಿ)ಗೆ ಹಸಿರು ನಿಶಾನೆ ತೋರುವರು. ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ ಅವರು ಎಂ.ಆರ್.ಎಫ್. ಕುರಿತು ಮಾಹಿತಿ ನೀಡುವ ಸ್ವಚ್ಛತಾ ರಥಕ್ಕೆ ಚಾಲನೆ ನೀಡುವರು.

ಸಂಸದ ನಳಿನ್ ಕುಮಾರ್ ಕಟೀಲ್ ಅವರು ಎಂ.ಆರ್.ಎಫ್. ಸಂಸ್ಥೆಯ ಸಿಇಆರ್ ನಿಧಿಯಡಿ ನೀಡಲಾಗುವ ಸ್ವಚ್ಛವಾಹಿನಿಯ ಹಸ್ತಾಂತರ ಮಾಡುವರು. ಶಾಸಕರಾದ ಡಾ. ಭರತ್ ವೈ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ರಾಜ್ಯಸಭಾ ಸಂಸದರಾದ ಡಿ. ವೀರೇಂದ್ರ ಹೆಗ್ಗಡೆ, ಶಾಸಕರಾದ ಡಿ. ವೇದವ್ಯಾಸ್ ಕಾಮತ್, ಯು.ಟಿ. ಖಾದರ್, ರಾಜೇಶ್ ನಾಯ್ಕ, ಹರೀಶ್ ಪೂಂಜಾ, ಸಂಜೀವ ಮಠಂದೂರು, ಉಮನಾಥ್ ಎ ಕೋಟ್ಯಾನ್, ವಿಧಾನ ಪರಿಷತ್ ಶಾಸಕರಾದ ಬಿ.ಎಂ. ಫಾರೂಕ್, ಕೆ. ಹರೀಶ್ ಕುಮಾರ್, ಆಯನೂರು ಮಂಜುನಾಥ, ಎಸ್.ಎಲ್. ಭೋಜೇಗೌಡ, ಕೆ. ಪ್ರತಾಪ್ ಸಿಂಹ ನಾಯಕ್, ಮಂಜುನಾಥ ಭಂಡಾರಿ, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ. ತೀರ್ಥರಾಮ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್ ಮಿಜಾರ್, ಎಡಪದವು ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಕುಮಾರ ದೇವಾಡಿಗ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪೊನ್ನುರಾಜ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಆಯುಕ್ತ ಗಂಗಾಧರ ಸ್ವಾಮಿ, ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಜಿಲ್ಲಾ ಪೊಲೀಸ್ ಅಧೀಕ್ಷಕ ಋಷಿಕೇಶ್ ಭಗವಾನ್ ಸೋನವಾಣೆ, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಉಪ ಕಾರ್ಯದರ್ಶಿ ಮಹೇಶ್ ಎಸ್.ಸಿ., ಎಡಪದವು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೇಮ, ಬೆಂಗಳೂರಿನ ಸಾಹಸ್ ವೇಸ್ಟ್ ಮ್ಯಾನೆಜ್‌ಮೆಂಟ್ ಪ್ರೈವೇಟ್ ಲಿಮಿಟೆಡ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವಿಲ್ಮಾ ರೋಡ್ರಿಗಸ್, ಅರ್ಚನಾ ತ್ರಿಪಾಠಿ, ಮಂಗಳೂರು ಮಂಗಳಾ ರಿಸೋರ್ಸ್ ಮ್ಯಾನೇಜ್‌ಮೆಂಟ್ ಪ್ರೈ.ಲಿ. ನ ಆಡಳಿತ ನಿರ್ದೇಶಕ ದಿಲ್‌ರಾಜ್ ಆಳ್ವ, ಮಂಗಳೂರು ಎಂ.ಸಿ.ಎಫ್. ಲಿಮಿಟೆಡ್ ಮುಖ್ಯ ಉತ್ಪಾದಕ ಅಧಿಕಾರಿ ಎಸ್. ಗಿರೀಶ್, ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾ ವiಹಾದೇವನ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಆಯುಕ್ತ ಗಂಗಾಧರ ಸ್ವಾಮಿ ಜೆ.ಎಂ., ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಉಪಕಾರ್ಯದರ್ಶಿ ಮಹೇಶ್ ಎಸ್.ಸಿ., ಎಡಪದವು ಗ್ರಾಮ ಪಂಚಾಯತ್ ಸದಸ್ಯರಾದ ಅನಸೂಯ, ಕುಸುಮಾವತಿ ಹಾಗೂ ಗುಣಪಾಲ ನಾಯಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

See also  ಬೆಂಗಳೂರು: ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಕರ್ನಾಟಕಕ್ಕೆ 1 ಸಾವಿರ ಕೋಟಿ ರೂ. ಅನುದಾನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು