ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ, ಕದ್ರಿ ಉದ್ಯಾನವನ ಅಭಿವೃದ್ಧಿ ಸಮಿತಿ, ಮಂಗಳೂರಿನ ಸಿರಿ ತೋಟಗಾರಿಕೆ ಸಂಘ ಮತ್ತು ಇತರೆ ಅಭಿವೃದ್ಧಿ ಇಲಾಖೆಗಳ ಸಹಭಾಗಿತ್ವದಲ್ಲಿ ನಗರದ ಕದ್ರಿ ಪಾಕ್೯ನಲ್ಲಿ ಆಯೋಜಿಸಿರುವ ಫಲ ಪುಷ್ಪ ಪ್ರದರ್ಶನ 2023ಕ್ಕೆ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಜ. 26ರ ಗುರುವಾರ ಚಾಲನೆ ನೀಡಿದರು.
ಸಂಸದರಾದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವಾಸ್ ಕಾಮತ್, ಮಂಗಳೂರು ಮೇಯರ್ ಜಯಾನಂದ ಅಂಚನ್, ಮೂಡಾ ಅಧ್ಯಕ್ಷ ರವಿಶಂಕರ್ ಮಿಜಾರು, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಎಚ್.ಆರ್. ನಾಯಕ್ ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು, ತೋಟಗಾರಿಕೆ ಇಲಾಖೆ ಸಿಬ್ಬಂದಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.