News Kannada
Friday, June 09 2023
ಮಂಗಳೂರು

ಉಳ್ಳಾಲ ಠಾಣೆಯಲ್ಲಿ ಭ್ರಷ್ಟಾಚಾರ – ವರದಿ ಸಲ್ಲಿಸಲು ಕಮಿಷನರ್ ಗೆ ಲೋಕಾಯುಕ್ತ ಸೂಚನೆ

Lokayukta asks commissioner to submit report on corruption in Ullal police station
Photo Credit : News Kannada

ಮಂಗಳೂರು: ಉಳ್ಳಾಲ ಠಾಣಾಧಿಕಾರಿ ಸಂದೀಪ್ ಜಿ.ಎಸ್ ಮತ್ತು ಸಬ್ ಇನ್ಸ್ ಪೆಕ್ಟರ್ ಪ್ರದೀಪ್ ಇವರ ವಿರುದ್ಧ ಸಾಮಾಜಿಕ ಕರ‍್ಯಕರ್ತರೊಬ್ಬರು ದಾಖಲಿಸಿರುವ ದೂರಿಗೆ ಸ್ಪಂಧಿಸದ ಹಾಗೂ ಮಾಹಿತಿ ಹಕ್ಕಿನಡಿ ಕೇಳಲಾದ ದಾಖಲೆಗಳನ್ನು ಒದಗಿಸದ ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಐಪಿಎಸ್ ವಿರುದ್ಧ ಕರ್ನಾಟಕ ಲೋಕಾಯುಕ್ತ ನೋಟೀಸು ಜಾರಿಗೊಳಿಸಿ ಫೆ.೧೪ ರ ಒಳಗಡೆ ತನಿಖಾ ವರದಿ ಹಾಗೂ ಸಂಬಂಧಿಸಿದ ದಾಖಲೆಗಳನ್ನು ಒದಗಿಸುವಂತೆ ಸೂಚಿಸಿದೆ.

ಸಾಮಾಜಿಕ ಕಾರ್ಯಕರ್ತ ಉಳ್ಳಾಲದ ಮೊಹಮ್ಮದ್ ಕಬೀರ್ ಎಂಬವರು ಪಪೊಲೀಸ್ ಕಮೀಷನರ್ ವಿರುದ್ಧ ದಾಖಲಿಸಿರುವ ದೂರಿನಂತೆ ನೋಟೀಸು ಜಾರಿಗೊಳಿಸಲಾಗಿದೆ.

ದೂರು : ಉಳ್ಳಾಲ ಪೊಲೀಸ್ ಠಾಣೆಯ ಅಧಿಕಾರಿಗಳಾದ ಇನ್ಸ್ ಪೆಕ್ಟರ್ ಸಂದೀಪ್, ಎಸ್.ಐ ಪ್ರದೀಪ್ ಎಂಬವರು ಪ್ರಕರಣಗಳಲ್ಲಿ ಠಾಣೆಗೆ ಬರುವವರೊಂದಿಗೆ ಹಣ ವಸೂಲು ಮಾಡಲು ಹಮೀದ್ ಎಂಬ ಬ್ರೋಕರ್ ಇಟ್ಟುಕೊಂಡಿದ್ದು, ಗಾಂಜಾ ಮಾಫಿಯ, ಮರಳು ಮಾಫಿಯ, ಹೊಟೇಲ್ ಮಾಲೀಕರಿಗೆ ಪ್ರತಿಯೊಂದರಲ್ಲಿ ಹಣದ ಬೇಡಿಕೆಯನ್ನು ಇಟ್ಟು ಜನರ ನೆಮ್ಮದಿಯನ್ನು ಹಾಳು ಮಾಡಿದ್ದಾರೆ. ಇಬ್ಬರು ಅಧಿಕಾರಿಗಳು ಉಳ್ಳಾಲಕ್ಕೆ ಬಂದ ಬಳಿಕ ಕೋಟ್ಯಂತರ ಸಂಪಾದಿಸಿದ್ದಾರೆ. ಈ ಕುರಿತು ಇಮೇಲ್ ಮೂಲಕ ಹಲವು ಇಲಾಖೆಯ ಮುಖ್ಯಸ್ಥರು, ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾನಿರ್ದೇಶಕರು ಮತ್ತು ಲೋಕಾಯುಕ್ತ, ಎಸಿಬಿ, ಎಡಿಜಿಪಿ, ದ.ಕ ಜಿಲ್ಲಾಧಿಕಾರಿ, ಪೊಲೀಸ್ ಆಯುಕ್ತರು ಎಲ್ಲರಿಗೂ ಭ್ರಷ್ಟಾಚಾರದ ವಿರುದ್ಧ ದೂರು ನೀಡಿದರೂ ಯಾವುದೇ ಸ್ಪಂಧನೆಯಿಲ್ಲ. ಪೊಲೀಸರ ಭ್ರಷ್ಟಾಚಾರದ ಬಗ್ಗೆ ದೂರು ನೀಡಿರುವುದಕ್ಕೆ ತನಗೆ ಬೆದರಿಕೆಯನ್ನು ಹಾಕಲಾಗಿದೆ. ಅಲ್ಲದೆ ದೂರು ನೀಡಿದ ಬಗ್ಗೆ ತನ್ನನ್ನೇ ವಿಚಾರಣೆ ನಡೆಸಲಾಗುತ್ತಿದೆ. ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟಗಾರರಿಗೆ ಕಡಿವಾಣವಿಲ್ಲ.

ಚಿನ್ನವನ್ನೇ ಲೂಟಿ ನಡೆಸಿದರು !
ಕೇರಳದ ಹೊಸಂಗಡಿಯಲ್ಲಿ ರಾಜಧಾನಿ ಹೆಸರಿನ ಚಿನ್ನದ ಅಂಗಡಿ ದರೋಡೆ ಮಾಡಿದ ಕಳ್ಳರಿಂದ ಜಪ್ತಿ ಮಾಡಿದ ಚಿನ್ನ ಮತ್ತು ಬೆಳ್ಳಿಯನ್ನು ಇನ್ಸ್ ಪೆಕ್ಟರ್ ಸಂದೀಪ್ ನ್ಯಾಯಾಲಯಕ್ಕೆ ನೀಡದೆ ಅವರ ಮನೆಗೆ ಸಾಗಿಸಿರುವ ಮಾಹಿತಿಯಿದೆ. ಚಿನ್ನದಂಗಡಿ ದರೋಡೆ ನಡೆಸಿದವರನ್ನು ೫ ಕಿ.ಮೀ ದೂರ ಸಂಚರಿಸುವಾಗಲೇ ಅವರನ್ನು ಕೇರಳ ಗಡಿಭಾಗದಲ್ಲಿ ಬಂಧಿಸಿದ್ದಾರೆ.

ಆರೋಪಿಗಳು ಕೆಎ-೦೨-ಎಎ-೮೨೩೯ ಇನೋವಾ ಕಾರನ್ನು ಬಾಡಿಗೆಗೆ ಪಡೆದುಕೊಳ್ಳುವಾಗ ಬಾಬಾಬುಡಾನ್ ಗಿರಿ ತೆರಳಲೆಂದು ಪಡೆದುಕೊಂಡಿದ್ದರು. ಈ ಕಾರಿನಲ್ಲಿ ಜಿಪಿಎಸ್ ಅಳವಡಿಸಿತ್ತು. ಕಾರು ಮಾಲೀಕರು ಸಂಶಯದ ಮೇರೆಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಇದನ್ನು ತನಿಖೆ ಕೈಗೆತ್ತಿಕೊಂಡಿದ್ದ ಉಳ್ಳಾಲ ಇನ್ಸ್ ಪೆಕ್ಟರ್ ಸಂದೀಪ್, ಎಸ್.ಐ ಪ್ರದೀಪ್ ಮತ್ತು ಪೊಲೀಸರು ಕೇರಳಕ್ಕೆ ತೆರಳಿ ಬಂಧಿಸಿದ್ದಾರೆ.

ಈ ವೇಳೆ ೧೪ ಕೆ.ಜಿ ಬೆಳ್ಳಿ , ಬೆಲೆಬಾಳುವ ವಾಚ್ ಹಾಗೂ ಲಕ್ಷಕ್ಕಿಂತಲೂ ಅಧಿಕ ಹಣವಿತ್ತು. ಇದನ್ನು ಮಂಜೇಶ್ವರ ಪೊಲೀಸರಿಗೆ ಒಪ್ಪಿಸದೆ ಇಬ್ಬರು ಹಂಚಿಕೊAಡು ಮಂಗಳೂರು ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಚಿನ್ನದ ಅಂಗಡಿಯ ಮಾಲೀಕರು ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಕಾರು ಚಾಲಕ ಹಾಗೂ ಅಂಗಡಿ ಮಾಲೀಕರನ್ನು ವಿಚಾರಣೆ ನಡೆಸಿದರೆ ಸಂಪೂರ್ಣ ಮಾಹಿತಿ ಹೊರಬರುವುದು. ತೊಕ್ಕೊಟ್ಟುವಿನಲ್ಲಿಯೂ ರಾಜಧಾನಿ ಚಿನ್ನದ ಅಂಗಡಿಯಿದ್ದು, ಅದಕ್ಕಾಗಿ ಮಂಗಳೂರು ನ್ಯಾಯಾಲಯದಲ್ಲಿಯೂ ೨೦೨೧ರ ಜು.೨೬ ರಂದು ಎಫ್ ಐ ಆರ್ ೧೭೧/೨೦೨೧ ದಾಖಲಾದರೆ, ಕೇರಳದ ಕಾಸರಗೋಡು ನ್ಯಾಯಾಲದಲ್ಲಿ ಆರ್.ಪಿ. ನಂ.೪೫೭/೨೦೨೧/ಎಫ್ ಸಿಎಂ ನ್ಯಾಯಾಲಯ ಸೇರಿ ಎರಡು ಪ್ರಕರಣಗಳು ದಾಖಲಾಗಿದೆ.

See also  ಆಲಮಟ್ಟಿ ಹಿನ್ನೀರಿನಲ್ಲಿ ಹೂಳು ಸಂಗ್ರಹವಾಗುತ್ತಿರುವುದನ್ನು ಪರಿಶೀಲಿಸಲು ಅಧ್ಯಯನಕ್ಕೆ ಚಾಲನೆ

ಪೊಲೀಸ್ ಕಮೀಷನರ್ ಶಶಿಕುಮಾರ್ ನಗರಕ್ಕೆ ಬಂದ ನಂತರ ಭ್ರಷ್ಟಾಚಾರ ಮಿತಿಮೀರಿದೆ. ಅವರ ಬೆಂಬಲವೂ ಇರುವುದರಿಂದ ಮಂಗಳೂರಿನ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಭ್ರಷ್ಟಾಚಾರ ವ್ಯಾಪಾರದಂತೆ ನಡೆಯುತ್ತಿದೆ. ಇದರಿಂದ ನಿಷ್ಠಾವಂತ ಪೊಲೀಸ್ ಅಧಿಕಾರಿಗಳು ತಲೆ ತಗ್ಗಿಸುವಂತಾಗಿದೆ. ಮೂವರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದರೆ ಅಕ್ರಮ ಸಂಪತ್ತನ್ನು ಪತ್ತೆಹಚ್ಚಬಹುದು. ದೂರುದಾರರಿಗೆ ಜೀವಕ್ಕೆ ಬೆದರಿಕೆಯಿರುವುದರಿಂದ ಗೌಪ್ಯತೆಯನ್ನು ಕಾಪಾಡುವಂತೆ ನಿವೇದಿಸಿಕೊಂಡಿದ್ದಾರೆ. ಇಮೇಲ್ ಪ್ರತಿ, ಆನ್ಲೈನ್ ನ್ಯೂಸ್ ಪ್ರತಿ, ಪೊಲೀಸ್ ಹಿಂಬರಹ ಪ್ರತಿ, ಗಣಿ ಮತ್ತು ಭುವಿಜ್ಞಾನ ಜ್ಞಾಪನಾ ಪತ್ರಗಳನ್ನು ಲಗತ್ತೀಕರಿಸಲಾಗಿದೆ. ಅಧಿಕಾರ ದುರುಪಯೋಗ ಮತ್ತು ಲಂಚದ ಆಪಾದನೆ ಮಾಡಿರುವುದರಿಂದ ಕರ್ನಾಟಕ ಲೋಕಾಯುಕ್ತ ಕಲಂ.೯ ರಡಿ ಯಲ್ಲಿ ತನಿಖೆ ನಡೆಸುವುದು ಸೂಕ್ತ ಎಂದು ಕರ್ನಾಟಕ ಲೋಕಾಯುಕ್ತ ಬೆಂಗಳೂರು ನೋಟೀಸಿನಲ್ಲಿ ತಿಳಿಸಿದೆ. ಅಲ್ಲದೆ ೨೦೨೩ರ ಫೆ.೧೪ ರ ಒಳಗೆ ಸೂಕ್ತ ದಾಖಲೆಗಳೊಂದಿಗೆ ಪೊಲೀಸ್ ಕಮೀಷನರ್ ಶಶಿಕುಮಾರ್ ಲೋಕಾಯುಕ್ತ ತನಿಖೆಗೆ ಹಾಜರಾಗುವಂತೆ  ಸೂಚಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು