ಮಂಗಳೂರು,ಜ.31: ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿಯವರು ಫೆ.2 ಹಾಗೂ 3ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ವಿವರ:
ಫೆ.2ರ ಗುರುವಾರ ರಾತ್ರಿ 8.25ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, ನಗರದ ಸರ್ಕಾರಿ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡುವರು.
ಫೆ.3ರ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯ ಚಟುವಟಿಕೆಗಳ ಕುರಿತಂತೆ ಚರ್ಚಿಸಲು ಮಂಗಳೂರು ಜಿಲ್ಲೆಯ ಹಿರಿಯ ಸಾಹಿತಿಗಳು, ಕನ್ನಡ ಪರ ಹೋರಾಟಗಾರರು ಹಾಗೂ ಕಲಾವಿದರನ್ನು ಭೇಟಿಯಾಗುವರು. ಸಂಜೆ 5ಗಂಟೆಗೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ 25ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸುವರು. ರಾತ್ರಿ 9ಗಂಟೆಗೆ ಮಂಗಳೂರಿನಿಂದ ವಿಮಾನದ ಮೂಲಕ ತೆರಳಿ 11.15ಕ್ಕೆ ಬೆಂಗಳೂರು ಕೇಂದ್ರಸ್ಥಾನ ತಲುಪುವರು ಎಂದು ಅಧ್ಯಕ್ಷರ ಆಪ್ತ ಸಹಾಯಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.