ಬಂಟ್ವಾಳ: ದೇಶದ ಆರ್ಥಿಕ ಅಭಿವೃದ್ಧಿ ಹಾಗೂ ಜನಸಾಮಾನ್ಯರಿಗೆ ಅನುಕೂಲತೆ ಒದಗಿಸುವ ದೃಷ್ಟಿಯಿಂದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಉತ್ತಮ ಬಜೆಟ್ ಮಂಡಿಸಿದ್ದಾರೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೇಳಿದ್ದಾರೆ.
ತೆರಿಗೆ ವಿನಾಯಿತಿಯ ಮಿತಿ ಹೆಚ್ಚಳ ಮಧ್ಯಮ ವರ್ಗದ ಜನರಿಗೆ ಅನುಕೂಲವಾಗಲಿದೆ. ಉದ್ಯೋಗ ಸೃಷ್ಟಿಗೆ ೧೦ ಲಕ್ಷ ಕೋಟಿ ನೀಡಿರುವುದು ನಿರುದ್ಯೋಗ ಸಮಸ್ಯೆ ಪರಿಹಾರಕ್ಕೆ ಕಾರಣವಾಗಲಿದೆ. ಸಿರಿಧಾನ್ಯ, ಜೈವಿಕ ಇಂಧನಕ್ಕೆ ಆದ್ಯತೆ ಬಜೆಟ್‌ನ ಉತ್ತಮ ಅಂಶವಾಗಿದೆ. ಪ್ರಧಾನಮಂತ್ರಿ ವಿಶ್ವಕರ್ಮ ಕೌಶಲ ಸಮ್ಮಾನ್ ಯೋಜನೆ ಕರಕುಶಲಕರ್ಮಿಗಳಿಗೆ ಅವಕಾಶಗಳ ಬಾಗಿಲು ತೆರೆಯಲಿದೆ.
ಮತ್ಸ್ಯಸಂಪದ ಯೋಜನೆ ಯೋಜನೆ ಮೂಲಕ ಮೀನುಗಾರಿಕೆ ಅಭಿವೃದ್ಧಿಗೆ ಆರು ಸಾವಿರ ಕೋಟಿ ರೂ.ಮೀಸಲಿಟ್ಟಿರುವುದು ಮೀನುಗಾರಿಕಾ ಸಮುದಾಯದ ಪ್ರಗತಿಗೆ ಮುನ್ನುಡಿ ಬರೆಯಲಿದೆ. ಮೀನುಗಾರರ ಸಮಸ್ಯೆಗಳ ಪರಿಹಾರಕ್ಕೂ ಕಾರಣವಾಗಲಿದೆ. ಪಿಎಂ ಗರೀಬ್ ಕಲ್ಯಾಣ ಯೋಜನೆಯಡಿ ಉಚಿತ ಆಹಾರ ಧಾನ್ಯ ನೀಡಿಕೆಯನ್ನು ಒಂದು ವರ್ಷ ವಿಸ್ತರಿಸಿರುವುದು ಬಡವರಿಗೆ ವರದಾನವಾಗಿದೆ ಎಂದು ಅವರು ಅವರು ಕೇಂದ್ರ ಬಜೆಟ್‌ಗೆ ಮೆಚ್ಚುಗೆ ಸೂಚಿಸಿದ್ದಾರೆ.