News Kannada
Wednesday, October 04 2023
ಮಂಗಳೂರು

ಬಂಟ್ವಾಳ: ಎಸ್ ಡಿಪಿಐ ಅಭ್ಯರ್ಥಿ ಇಲ್ಯಾಸ್ ಮುಹಮ್ಮದ್ ಸಾರಥ್ಯದಲ್ಲಿ ಬೃಹತ್ ಸಾರ್ವಜನಿಕ ಕಾರ್ಯಕ್ರಮ

Bantwal: SDPI candidate Ilyas Muhammed presided over a massive public function in Bantwal.
Photo Credit : News Kannada

ಬಂಟ್ವಾಳ: ಬಂಟ್ವಾಳ ಕ್ಷೇತ್ರದ ಎಸ್ ಡಿ ಪಿ ಐ ಅಭ್ಯರ್ಥಿ ಇಲ್ಯಾಸ್ ಮುಹಮ್ಮದ್ ತುಂಬೆ ಇವರ ಸಾರಥ್ಯದಲ್ಲಿ ಕೊಳ್ನಾಡು ಬ್ಲಾಕ್ ಸಮಿತಿ ವತಿಯಿಂದ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಕಲಂದರ್ ಪರ್ತಿಪ್ಪಾಡಿ ಇವರ ಸಭಾದ್ಯಕ್ಷತೆಯಲ್ಲಿ ಸಾಲೆತ್ತೂರಿನಲ್ಲಿ ಬೃಹತ್ ಸಾರ್ವಜನಿಕ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಎಸ್ ಡಿ ಪಿ ಐ ರಾಷ್ಟ್ರೀಯ ಕಾರ್ಯದರ್ಶಿ ಹಾಗೂ ಮೂಲ್ಕಿ- ಮೂಡಬಿದ್ರೆ ಕ್ಷೇತ್ರದ ಎಸ್ ಡಿ ಪಿ ಐ ಅಭ್ಯರ್ಥಿ ಅಲ್ಫಾನ್ಸೋ ಫ್ರಾಂಕೋ ಉದ್ಘಾಟಿಸಿದರು.

ಕಾರ್ಯಕ್ರಮಕ್ಕೆ ಮುಖ್ಯ ಭಾಷಣಗಾರರಾಗಿ ಆಗಮಿಸಿದ್ದ ರಾಷ್ಟ್ರೀಯ ಚುನಾವಣಾ ವೀಕ್ಷಕರಾದ ವಿ ಎಮ್ ಫೈಝಲ್ ಮಾತನಾಡಿ, ‘ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದಿಂದ ಜನರು ಬೇಸತ್ತಿದ್ದಾರೆ. ಕಲ್ಯಾಣ ರಾಜ್ಯದ ಕನಸನ್ನು ಕಂಡಿರುವ ಮತ್ತು ಜನಪರ ಕಾರ್ಯಗಳಿಗೆ ಸದಾ ಸ್ಪಂದಿಸುತ್ತಿರುವ ಎಸ್ ಡಿ ಪಿ ಐ ಒಂದೇ ಪರ್ಯಾಯವಾಗಿದೆ. ಪಕ್ಷವು ಇಲ್ಯಾಸ್ ಮುಹಮ್ಮದ್ ತುಂಬೆಯವರನ್ನು ಕಣಕ್ಕಿಳಿಸಿದೆ. ಇವರು ಓರ್ವ ದಕ್ಷ ಹಾಗೂ ಪ್ರಾಮಾಣಿಕ ಅಭ್ಯರ್ಥಿಯಾಗಿದ್ದಾರೆ. ಮುಂದಿನ ಚುನಾವಣೆಯಲ್ಲಿ ಇವರನ್ನು ಗೆಲ್ಲಿಸುವಂತೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಎಸ್ ಡಿ ಪಿ ಐ ಕರ್ನಾಟಕ ರಾಜ್ಯ ಕಾರ್ಯದರ್ಶಿ ಆನಂದ ಮಿತ್ತಬೈಲ್ ಮಾತಾಡಿ ” ಎಸ್ ಡಿ ಪಿ ಐ ಪಕ್ಷವು ಸ್ವಾಭಿಮಾನ ಇರುವವರ ಪಕ್ಷವಾಗಿದೆ. ಜನತೆಯ ಕಷ್ಟಗಳಿಗೆ ಸ್ಪಂದಿಸುವ ಮತ್ತು ಶೋಷಿತಕ್ಕೊಳಗಾದವರ ಧ್ವನಿಯಾಗಿದೆ. ಸ್ವಾಭಿಮಾನದ ಬದುಕಿಗಾಗಿ ದಲಿತ ಸಹೋದರರು ಎಸ್ ಡಿ ಪಿ ಐ ಪಕ್ಷಕ್ಕೆ ಸೇರ್ಪಡೆಯಾಗಬೇಕು ಎಂದು ಕರೆ ನೀಡಿದರು.
ಎಸ್ ಡಿ ಪಿ ಐ ಪಕ್ಷದ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾದ ಇಲ್ಯಾಸ್ ಮುಹಮ್ಮದ್ ತುಂಬೆ ಮಾತನಾಡಿ, ‘ಮೂಲಭೂತ ಸೌಕರ್ಯ ಗಳ ಜೊತೆಗೆ ಜನರ ನೈತಿಕ, ಸಾಮಾಜಿಕ, ಶೈಕ್ಷಣಿಕ ಪ್ರಗತಿಯತ್ತ ಕೂಡ ಎಸ್ ಡಿ ಪಿ ಐ ದೂರದೃಷ್ಟಿಯಿಟ್ಟಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷವು ಸುಳ್ಳು ಭರವಸೆಗಳನ್ನು ಕೊಟ್ಟು ಜನಸಾಮಾನ್ಯರನ್ನು ವಂಚಿಸಿಕೊಂಡು ಚುನಾವಣೆಯಲ್ಲಿ ಜಯಗಳಿಸಲು ಯತ್ನಿಸುತ್ತಿರುವಾಗ ಇಲ್ಲಿನ ಜನರು ಪ್ರಬುದ್ಧರಾಗಿದ್ದುಕೊಂಡು ಇವರ ವಂಚನೆಗಳಿಗೆ ಬಲಿಯಾಗದೆ ನನ್ನನ್ನು ಈ ಕ್ಷೇತ್ರದಿಂದ ಆಯ್ಕೆ ಮಾಡುವುದರ ಮೂಲಕ ಎಸ್ ಡಿ ಪಿ ಐ ಗೆ ಒಂದು ಅವಕಾಶ ಕಲ್ಪಿಸಿಕೊಡಬೇಕು ಹಾಗೂ ಇನ್ನಿತರ ವಂಚಿಸುವ ಪಕ್ಷಗಳಿಗೆ ತಕ್ಕ ಪಾಠವನ್ನು ಕಲಿಸಬೇಕು ಎಂದು ಹೇಳಿದರು.
ರಾಜ್ಯ ಸಮಿತಿ ಸದಸ್ಯ ರಿಯಾಝ್ ಕಡಂಬು ಮಾತನಾಡಿ ‘ಬಿಜೆಪಿ ಮತ್ತು ಕಾಂಗ್ರೆಸ್ ನ ಶಾಸಕರು ಆಯ್ಕೆಯಾಗಿದ್ದ ಸಂದರ್ಭದಲ್ಲಿ ಈ ಭಾಗದ ಅಭಿವೃದ್ಧಿಯು ಮರೀಚಿಕೆಯಾಗಿದೆ. ಈ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ಅವರು ಪಕ್ಷದ ಕಾರ್ಯಕ್ರಮವಿದ್ದಾಗ ಮಾತ್ರ ಈ ಪರಿಸರಕ್ಕೆ ಭೇಟಿ ನೀಡುತ್ತಾರೆ ಹೊರತು ಜನಸಾಮಾನ್ಯರ ಸಂಕಷ್ಟಗಳಿಗೆ ಭಾಗಿಯಾಗುವುದಿಲ್ಲ. ಇವರ ಕಪಟ ರಾಜಕಾರಣಕ್ಕೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪ್ರಜ್ಞಾವಂತ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

See also  ಜಮ್ಮು ಮತ್ತು ಕಾಶ್ಮೀರ: ಗಡಿ ನಿಯಂತ್ರಣ ರೇಖೆಯಲ್ಲಿ ಒಳನುಸುಳುವಿಕೆ ಪ್ರಯತ್ನ ವಿಫಲಗೊಳಿಸಿದ ಸೇನೆ

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಎಸ್ ಡಿ ಪಿ ಐ ದ .ಕನ್ನಡ ಜಿಲ್ಲಾ ಸಮಿತಿ ಕಾರ್ಯದರ್ಶಿ ಶಾಕಿರ್ ಅಳಕೆಮಜಲ್ , ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಸದಸ್ಯ ಮಹಮೂದ್ ಕಡಂಬು ಮಾತನಾಡಿದರು.

ಈ ಸಂದರ್ಭ ಎಸ್ ಡಿ ಪಿ ಐ ಬಂಟ್ವಾಳ ಕ್ಷೇತ್ರದ ಚುನಾವಣಾ ಉಸ್ತುವಾರಿ ಶಾಹುಲ್ ಹಮೀದ್ ಎಸ್ ಎಚ್, ಕ್ಷೇತ್ರ ಸಮಿತಿ ಸದಸ್ಯ ಮುಸ್ತಾಕ್ ತಲಪಾಡಿ, ಬಂಟ್ವಾಳ ಪುರಸಭಾ ಸಮಿತಿ ಅಧ್ಯಕ್ಷ ಶರೀಫ್ ವಳವೂರ್, ಕೊಳ್ನಾಡು ಬ್ಲಾಕ್ ಸಮಿತಿ ಅಧ್ಯಕ್ಷ ಬಶೀರ್ ಕೊಳ್ನಾಡು, ಕಾರ್ಯದರ್ಶಿ ಹೈದರ್ ಆಲಿ ಕಡಂಬು, ವಿಟ್ಲಾ ಪಟ್ಟಣ ಸಮಿತಿ ಕಾರ್ಯದರ್ಶಿ ಮುಸ್ತಾಫ ಒಕ್ಕೆತ್ತೂರು, ಕೊಳ್ನಾಡು ಗ್ರಾಮ ಸಮಿತಿ ಅಧ್ಯಕ್ಷ ಲತೀಫ್ ಎಸ್ ಎನ್ ಮತ್ತು ಇತರ ನಾಯಕರು, ಕಾರ್ಯಕರ್ತರು, ಹಿತೈಷಿಗಳು ಉಪಸ್ಥಿತರಿದ್ದರು.
ಅಶ್ರಫ್ ತಲಪಾಡಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು