ಬಂಟ್ವಾಳ: ಮಂಗಳೂರಿನಲ್ಲಿ ನಡೆದ ಬೈಕ್ ಅಪಘಾತವೊಂದರಲ್ಲಿ ಮಾಣಿಲ ನಿವಾಸಿ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ.
ಮಾಣಿಲ ಗ್ರಾಮದ ಪಕಳಕುಂಜ ಬಾಳೆಕಾನ ನಿವಾಸಿ ಗೋಪಾಲಕೃಷ್ಣ ಮಣಿಯಾಣಿರವರ ಪುತ್ರ ಕಾರ್ತಿಕ್ ಮಣಿಯಾಣಿ (24 ) ಮೃತದುರ್ದೈವಿ.
ಕಾರ್ತಿಕ್ ಮಂಗಳೂರಿನಲ್ಲಿ ಡೆಕೋರೇಷನ್ ಕೆಲಸ ನಿರ್ವಹಿಸುತ್ತಿದ್ದು, ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಅಡ್ಯಾರ್ ಬಳಿ ಅಪಘಾತ ನಡೆದಿದೆ ಎನ್ನಲಾಗಿದೆ.
ಮೃತರು ತಾಯಿ ಸುಧಾಮಣಿ ಹಾಗೂ ಓರ್ವ ಸಹೋದರ ನನ್ನು ಅಗಲಿದ್ದಾರೆ.