ಮಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೊಲ್ಲಬೇಕು ಎಂದು ಹೇಳಿಕೆ ನೀಡಿರುವ ಬಿಜೆಪಿ ಸಚಿವ ಅಶ್ವತ್ಥ
ನಾರಾಯಣ ವಿರುದ್ಧ ಪ್ರಕರಣ ದಾಖಲಿಸುವಂತೆ ಮಾಜಿ ಶಾಸಕ ಐವನ್ ಡಿಸೋಜಾ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್ ಕಮಿಷನರ್ ಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕಾಂಗ್ರೆಸ್ ನ ರಾಜ್ಯ, ಜಿಲ್ಲಾ ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು ಸಚಿವರು ಈ ರೀತಿ ಪ್ರಚೋದನಕಾರಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಸ್ವಯಂ ಪ್ರೇರಿತರಾಗಿ ಪೊಲೀಸರು ಪ್ರಕರಣ ದಾಖಲಿಸಬೇಕು. ರಾಜ್ಯಪಾಲರು ಈ ಪ್ರಕರಣದಲ್ಲಿ ಮಧ್ಯ ಪ್ರವೇಶಿಸಬೇಕು ಎಂದು ಐವನ್ ಅಗ್ರಹಿಸಿದರು.
ಸಚಿವ ಡಾ.ಅಶ್ವತ್ಥನಾರಾಯಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೆ ಇಲ್ಲವೇ ಅವರನ್ನು ಪೊಲೀಸರು ಬಂಧಿಸುವವರೆಗೆ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ ಎಂದು ಐವನ್ ಡಿಸೋಜ ತಿಳಿಸಿದರು.