ಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಸುರತ್ಕಲ್ ಹಾಗೂ ಗುರುಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಶಾಸಕ ಬಿ.ಎ. ಮೊಹಿಯುದ್ದೀನ್ ಬಾವಾ ನೇತೃತ್ವದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಕೊಲೆ ಬೆದರಿಕೆ ಹಾಕಿರುವ ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಶುಕ್ರವಾರ ಸಂಜೆ ಸುರತ್ಕಲ್ ಜಂಕ್ಷನ್ ನಲ್ಲಿ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಮಾತಾಡಿದ ಮೊಯಿದೀನ್ ಬಾವಾ, “ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೇ ಬಹಿರಂಗವಾಗಿ ಕೊಲೆ ಬೆದರಿಕೆ ಹಾಕಿರುವ ಅಶ್ವಥ್ ನಾರಾಯಣರನ್ನು ಪೊಲೀಸರು ಕೂಡಲೇ ಬಂದಿಸಬೇಕು. ಅವರ ವಿರುದ್ಧ ಸುಮೊಟೊ ಪ್ರಕರಣ ದಾಖಲಿಸಬೇಕು” ಎಂದು ಅಗ್ರಹಿಸಿದರು.
ಪ್ರತಿಭಟನಾ ಸಭೆಯಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಸಂಘಟನಾ ಕಾರ್ಯದರ್ಶಿ ಹ್ಯಾರಿಸ್ ಬೈಕಂಪಾಡಿ, ರಾಜೇಶ್ ಕುಳಾಯಿ ಮತ್ತಿತರರು ಉಪಸ್ಥಿತರಿದ್ದರು.