News Kannada
Wednesday, October 04 2023
ಮಂಗಳೂರು

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮಿತ್ತೂರಿನ ಫ್ರೀಡಂ ಕಮ್ಯುನಿಟಿ ಹಾಲ್​ ಎನ್ಐಎ ಸ್ವಾಧೀನಕ್ಕೆ

Another warning message to Praveen Nettar's killers
Photo Credit : Twitter

ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಿತ್ತೂರಿನ ಫ್ರೀಡಂ ಕಮ್ಯುನಿಟಿ ಹಾಲ್​ ಅನ್ನು ಸ್ವಾಧೀನ ಪಡಿಸಿಕೊಂಡಿದೆ.

ತನಿಖೆ ವೇಳೆ ಫ್ರೀಡಂ ಕಮ್ಯೂನಿಟಿ ಹಾಲ್‌ನಲ್ಲಿ ಪಾಪ್ಯುಲರ್ ಫ್ರಂಟ್‌ ಅಫ್ ಇಂಡಿಯಾದ ಸದಸ್ಯರಿಗೆ ಅನಧಿಕೃತವಾಗಿ ಭಯೋತ್ಪಾದನೆಗೆ ಸಹಕಾರಿಯಾಗುವಂತಹ ಶಸ್ತ್ರಾಸ್ತ್ರ ತರಬೇತಿಯನ್ನು ನೀಡಲಾಗುತ್ತಿತ್ತು ಎಂಬ ವಿಚಾರ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಎನ್​ಐಎ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಕಮ್ಯುನಿಟಿ ಹಾಲ್ ಇರುವ 20 ಗುಂಟೆ ಜಾಗವನ್ನು ಎನ್ಐಎ ಸಂಪೂರ್ಣ ತನ್ನ ಹಿಡಿತಕ್ಕೆ ತೆಗೆದುಕೊಂಡಿದೆ. ಈ ವಿಚಾರವಾಗಿ ಆದೇಶದ ಪ್ರತಿಯನ್ನು ಹಾಲ್ ಮಾಲೀಕರು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿಗೆ ಕಳುಹಿಸಲಾಗಿದೆ ಎಂದು ಎನ್​ಐಎ ಅಧಿಕೃತ ಮೂಲಗಳು ತಿಳಿಸಿವೆ. ಈ ಭೂಮಿ, ಕಟ್ಟಡವನ್ನು ಪರಭಾರೆ ಮಾಡುವುದಾಗಲಿ, ಬಾಡಿಗೆಗೆ ನೀಡುವುದಾಗಲಿ, ಯಾವುದೇ ಬದಲಾವಣೆ ಮಾಡುವುದಾಗಲಿ, ಬಳಸಿಕೊಳ್ಳುವುದಾಗಲೀ ಮಾಡುವುದನ್ನು ಸಂಪೂರ್ಣವಾಗಿ ಎನ್‌ಐಎ ನಿಷೇಧಿಸಿ, ವಶಕ್ಕೆ ಪಡೆದಿರುವ ಕುರಿತು ಆದೇಶ ಜಾರಿಗೊಳಿಸಿದೆ.

See also  ಬೆಳ್ತಂಗಡಿ: ವಕ್ಫ್ ಜಿಲ್ಲಾ ಉಪಾಧ್ಯಕ್ಷ ಫಕೀರಬ್ಬ ಮರೋಡಿ ಅವರಿಗೆ ಕಾಜೂರಿನಲ್ಲಿ ಗೌರವಾರ್ಪಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು