ಪುತ್ತೂರು: ಸುಬ್ರಹ್ಮಣ್ಯ ಸಮೀಪದ ಗುಂಡ್ಯದಲ್ಲಿಯೂ ಕಾಡಾನೆ ಅರಣ್ಯ ಇಲಾಖೆಗೆ ಸೇರಿದ ನರ್ಸರಿಗೆ ಲಗ್ಗೆಯಿಟ್ಟು ಹಾನಿಯಾದ ಘಟನೆ ಸಂಭವಿಸಿದೆ. ಕಾಡು ಗಿಡಗಳು, ಪೈಪ್ ಸೇರಿದಂತೆ ಸ್ಥಳದಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಿದೆ ಎಂದು ವರದಿಯಾಗಿದೆ. ಕಡಬ ತಾಲೂಕಿನ ರೆಂಜಿಲಾಡಿಯಲ್ಲಿ ಇಬ್ಬರನ್ನು ಕೊಂದ ಬಳಿಕ ಕಾಡಾನೆ ಸೆರೆಗೆ ಕಾರ್ಯಾಚರಣೆ ಆರಂಭಿಸಲಾಗಿತ್ತು,
ಮಂಗಳವಾರ ಆರಂಭಗೊಂಡ ಕಾರ್ಯಾಚರಣೆಯಲ್ಲಿ ೨ ದಿನದ ಬಳಿಕ ಕೊಂಬಾರು ಬಳಿಯ ಮಂಡೆಕರದಲ್ಲಿ ಕೃತ್ಯ ಎಸಗಿದ ಕಾಡಾನೆಯನ್ನು ಸೆರೆ ಹಿಡಿದು ನಾಗರಹೊಳೆ ಮತ್ತಿಗೋಡು ಸಾಕಾನೆ ಶಿಬಿರಕ್ಕೆ ಕೊಂಡೊಯ್ಯುವಲ್ಲಿ ಯಶಸ್ವಿಯಾಗಿದೆ.