ಬಂಟ್ವಾಳ: ಬಿಜೆಪಿಯ ತತ್ವಸಿದ್ದಾಂತದ ಮೇಲೆ ಪಕ್ಷದ ಕಾರ್ಯಕರ್ತನಾಗಿ ನಿಷ್ಠೆಯಿಂದ ನಿರ್ವಹಿಸಿದ್ದೇನೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೇಳಿದರು.
ಅವರು ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಬಡಗಕಜೆಕಾರ್ – ತೆಂಕಕಜೆಕಾರ್ ಗ್ರಾಮದಲ್ಲಿ ಸುಮಾರು 10 ಕೋಟಿಗೂ ಅಧಿಕ ಅನುದಾನಗಳ ಮೂಲಕ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದ ಬಳಿಕ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ಕ್ಷೇತ್ರದ ಅಭಿವೃದ್ಧಿಗಾಗಿ ಶಕ್ತಿ ಮೀರಿ ಪ್ರಯತ್ನ ಮಾಡಿದ್ದೇನೆ. ಕೋವಿಡ್ ಸಂಕಷ್ಟದ ಸಮಯದಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರದ ಸಹಕಾರದಿಂದ ಕ್ಷೇತ್ರದ ಜನರ ಆರೋಗ್ಯ ರಕ್ಷಣೆಗಾಗಿ ಆಸ್ಪತ್ರೆಗಳನ್ನು ಸುಸಜ್ಜಿತಗೊಳಿಸಿ , ಎಲ್ಲವನ್ನು ಯಶಸ್ವಿಯಾಗಿ ನಿಭಾಯಿಸಲಾಗಿದೆ. ಹೆಚ್ಚಿನ ಬೇಡಿಕೆಯ ರಸ್ತೆಗಳನ್ನು ಆಧ್ಯತೆಯ ನೆಲೆಯಲ್ಲಿ ಅಭಿವೃದ್ಧಿಗೊಳಿಸಲಾಗಿದೆ. ಅತೀ ಹೆಚ್ಚು ದೈವ ದೇವಸ್ಥಾನಗಳಿಗೆ ರಸ್ತೆ ಸಹಿತ ಮೂಲಭೂತ ಸೌಕರ್ಯಗಳಿಗೆ ಅನುದಾನ ಒದಗಿಸಲಾಗಿದೆ. ಜನರು ನನ್ನ ವಿಶ್ವಾಸವಿಟ್ಟು ಜನಪ್ರತಿನಿಧಿಯಾಗಿ ಆಯ್ಕೆ ಮಾಡಿ ವಿಧಾನಸಭೆಗೆ ಕಳುಹಿಸಿದ ನಂತರ ಅವರಿಗೆ ಚ್ಯುತಿಯಾಗದಂತೆ ಪ್ರಾಮಾಣಿಕವಾಗಿ ಜನರ ಸೇವೆ ಮಾಡಿದ್ದೇನೆ ಎಂದು ಅವರು ತಿಳಿಸಿದರು.
ಮಾಜಿ ಜಿ.ಪಂ.ಸದಸ್ಯ ಎಂ.ತುಂಗಪ್ಪ ಬಂಗೇರ, ಮಾತನಾಡಿ, ಬ್ರಹ್ಮ ಶ್ರೀ ನಾರಾಯಣ ಗುರುಗಳ ಹೆಸರಿಬಲ್ಲಿ ವಸತಿ ಶಾಲೆ ನಿರ್ಮಾಣ ಮಾಡಿದ ಕೀರ್ತಿ ಬಿಜೆಪಿ ಸರಕಾರ ಹಾಗೂ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರಿಗೆ ಸಲ್ಲುತ್ತದೆ ಎಂದು ಅವರು ತಿಳಿಸಿದರು. ಬಿಜೆಪಿಯ ಭದ್ರಕೋಟೆಯಾಗಿರುವ ಈ ಭಾಗದಿಂದ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಅತ್ಯಧಿಕ ಮತಗಳನ್ನು ತೆಗೆದುಕೊಡುವ ಕೆಲಸ ಕಾರ್ಯಕರ್ತರು ಮಾಡಬೇಕು.ಅ ಮೂಲಕ ಋಣವನ್ನು ತೀರಿಸಬೇಕು ಎಂದು ಅವರು ಮನವಿ ಮಾಡಿದರು.
ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಮಾತನಾಡಿ ಅಭಿವೃದ್ಧಿ ಎಂಬುದು ನಿರಂತರವಾಗಿ ಹರಿಯುವ ನೀರಿನಂತೆ. ಈ ಭಾಗದ ಕಾರ್ಯಕರ್ತರ ಬೇಡಿಕೆಗಳನ್ನು ಹಂತಹಂತವಾಗಿ ಮಾಡಲಾಗಿದೆ. ಕಳೆದ 30 ವರ್ಷಗಳಿಂದ ಆಗದ ಬಹುತೇಕ ಅಭಿವೃದ್ಧಿಯನ್ನು 4 ವರ್ಷ 5 ತಿಂಗಳಿನಲ್ಲಿ ಮಾಡಲಾಗಿದೆ.
ಬಾಕಿ ಉಳಿದಿರುವ ಎಲ್ಲಾ ಬೇಡಿಕೆಗಳನ್ನು ಪೂರೈಸಲು ಮತ್ತೆ ರಾಜೇಶ್ ನಾಯ್ಕ್ ಅವರನ್ನು ಶಾಸಕರಾಗಿ ಆಯ್ಕೆ ಮಾಡುವ ಜವಬ್ದಾರಿ ನಮ್ಮ ಮೇಲಿದೆ ಎಂದು ಅವರು ತಿಳಿಸಿದರು.
ವೇದಿಕೆಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ, ಗ್ರಾಮಪಂಚಾಯತ್ ಸದಸ್ಯರಾದ ಸತೀಶ್ ಬಂಗೇರ,ಸುಗಂದಿ, ಸುರೇಶ್ ಬಾರ್ದೊಟ್ಟು, ಉಷಾ, ಜಿಲ್ಲಾ ಯುವ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ,ಪುರುಷೋತ್ತಮ ಶೆಟ್ಟಿ ವಾಮದಪದವು, ಹರೀಶ್ ಪ್ರಭು, ಕೇಶವ ಪ್ರಭು, ಶ್ಯಾಮ ನಾಯ್ಕ, ದಿನೇಶ್ ಜ್ಯೇಂಕಾರು, ಯಶವಂತ, ತಾರಾನಾಥ ,ಗಿರಿಯಪ್ಪ ಮೂಲ್ಯ , ಹರೀಶ್ ನಾಯ್ಕ್, ವಿನ್ಸೆಂಟ್ ಮನೋಹರ್ ಸೇರಾ, ರೋಹಿನಾಥ್ ಕೆ,ಅರ್ಚನಾ, ಶೇಷಗಿರಿ, ಮಾಲತಿಶೋಭಾ, ರವೀಂದ್ರ ಶೆಟ್ಟಿ, ಮಂಜುನಾಥ ಮಾಡ, ಮತ್ತಿತರರ ಪ್ರಮುಖರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಅಭಿವೃದ್ಧಿಯ ರೂವಾರಿ ಶಾಸಕ ರಾಜೇಶ್ ನಾಯ್ಕ್ ಅವರನ್ನು ಹಾಗೂ ಕ್ರೀಯಾಶೀಲ ಗ್ರಾಮಪಂಚಾಯತ್ ಸದಸ್ಯ ಸತೀಶ್ ಬಂಗೇರ ಅವರನ್ನು ಬೂತ್ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಪ್ರಕಾಶ್ ಕರ್ಲ ಸ್ವಾಗತಿಸಿದರು.
ತಾರಾನಾಥ ಪರಂಪಳ್ಳಿ ಧನ್ಯವಾದ ನೀಡಿದರು. ಗ್ರಾ.ಪಂ.ದೇವದಾಸ್ ಅಬುರ ಕಾರ್ಯಕ್ರಮ ನಿರೂಪಿಸಿದರು.