ಮಂಗಳೂರು,ಮಾ.4: ಇಲ್ಲಿನ ನಗರ ಪೊಲೀಸ್ ಆಯುಕ್ತರ ವ್ಯಾಪ್ತಿಯ ಉರ್ವಾ ಮಾರಿಗುಡಿ ದೇವಸ್ಥಾನದಲ್ಲಿ ಮಾ.3ರ ಶುಕ್ರವಾರದಿಂದ ಮಾ.8ರ ಬುಧವಾರದವರೆಗೆ ವರ್ಷಾವಧಿ ಉತ್ಸವವನ್ನು ಹಮ್ಮಿಕೊಳ್ಳಲಾಗಿದೆ.
ಕಾರಣ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು ಸಾವಿರಾರು ಭಕ್ತಾಧಿಗಳು ಆಗಮಿಸುವುದರಿಂದ ಈ ಸಮಯದಲ್ಲಿ ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿ ಅಹಿತಕರ ಘಟನೆಗಳಿಗೆ ಕಾರಣರಾಗಿ ನಗರದ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟು ಮಾಡುವ ಸಾಧ್ಯತೆ ಇರುವುದರಿಂದ ಉರ್ವಾ ಮಾರಿಗುಡಿ ದೇವಸ್ಥಾನದ ಪರಿಸರದ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವ ನ್ಯೂ ಕುಡ್ಲ ಬಾರ್ ಆ್ಯಂಡ್ ರೆಸ್ಟೋರೆಂಟ್ ಮತ್ತು ಚಕಿತ ಬಾರ್ ಅಂಡ್ ರೆಸ್ಟೋರೆಂಟ್ ಮಧ್ಯದ ಅಂಗಡಿಗಳನ್ನು ಮಾ.7ರ ಬೆಳಗ್ಗೆ 6 ಗಂಟೆಯಿಂದ ಮಾ.8ರ ಬೆಳಿಗ್ಗೆ 6ಗಂಟೆಯವರೆಗೆ ಮುಚ್ಚುವಂತೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಆದೇಶ ಹೊರಡಿಸಿದ್ದಾರೆ.