ಬೆಳ್ತಂಗಡಿ: ಧರ್ಮಸ್ಥಳದಲ್ಲಿ 2023ರ ಮೇ 3 ರಂದು ಬುಧವಾರ ಸಂಜೆ ಗಂಟೆ 6.40ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದೆ.
ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿರುವ ಪ್ರವಚನ ಮಂಟಪದಲ್ಲಿ ಶನಿವಾರ ವಿವಾಹ ನೋಂದಣಿ ಕಾರ್ಯಾಲಯವನ್ನು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಉದ್ಘಾಟಿಸಿ ಶುಭ ಹಾರೈಸಿದರು.
ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ ರಾವ್, ನಿವೃತ್ತ ಮುಖ್ಯೋಪಾಧ್ಯಾಯ ಧರ್ಣಪ್ಪ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು: 08256-266644, 9663464648 / 8147263422