ಬೆಳ್ತಂಗಡಿ: ಶ್ರೀ ಭಗವತಿ ದೇವಸ್ಥಾನ ಮೇಲಂತಬೆಟ್ಟು ಇದರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಬೀಡಿನಲ್ಲಿ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಬಿಡುಗಡೆ ಗೊಳಿಸಿ, ಬ್ರಹ್ಮಕಲಶೋತ್ಸವ ಯಶಸ್ವಿಯಾಗಿ ನಡೆಯಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಧರ್ಮದರ್ಶಿ ಯೋಗೀಶ್ ಪೂಜಾರಿ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಡಾ. ಎಂ.ಎಂ ದಯಾಕರ್ ಭಟ್ ಉಜಿರೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುರೇಶ್ ಶೆಟ್ಟಿ ಮಾಪಲಾಡಿ, ಬೆಳ್ತಂಗಡಿ ಎಸ್ಕೆಡಿಆರ್ ಡಿಪಿ ಯೋಜನಾಧಿಕಾರಿ ಸುರೇಂದ್ರ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ರಾಜೀವ ಸಾಲ್ಯಾನ್ ಮುಂಡೂರು, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಮೋಹನ್ ಬಟ್ಯರಡ್ಡ, ಪೂಜಾ ಸಮಿತಿ ಅಧ್ಯಕ್ಷ ರಮೇಶ್ ಬಂಗೇರ ಅಂಕಾಜೆ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಜಯಾನಂದ ಅಂಕಾಜೆ ಲಾಯಿಲ, ಪ್ರಧಾನ ಅರ್ಚಕ ಯಶವಂತ ಶಾಂತಿ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಯೋಗೀಶ್ ಕುಲಾಲ್ ಪಕ್ಕಿದಕಲ, ನವೋದಯ ಯುವಕ ಮಂಡಲದ ಅಧ್ಯಕ್ಷ ವಸಂತ, ಶೇಖರ್ ಪೂಜಾರಿ, ಪ್ರತೀಕ್ ಕೋಟ್ಯಾನ್ ಉಪಸ್ಥಿತರಿದ್ದರು. ಧರ್ಮಸ್ಥಳದಲ್ಲಿದ್ದ ತುರ್ತು ಕಾರ್ಯ ದಲ್ಲಿದ್ದ ಶಾಸಕರು ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರಾದ ಹರೀಶ್ ಪೂಂಜ ಅವರು ತಾನು ನಿಮ್ಮ ಜೊತೆಗಿದ್ದು, ಪೂಣ೯ ಸಹಕಾರ ನೀಡುವುದಾಗಿ ತಿಳಿಸಿದರು.