ಮಂಗಳೂರು: ಕೊಡಗು ಜಿಲ್ಲೆಯ ನಾಪೋಕ್ಲು ಭಾಗದಲ್ಲಿ ಭಾರಿ ಮಳೆಯಾಗಿದೆ. ಅಂತೆಯೇ ಚಿಕ್ಕಮಗಳೂರು ಜಿಲ್ಲೆ ಜಯಪುರ, ಕಳಸ ಭಾಗದಲ್ಲಿ ಗುಡುಗು ಸಹಿತ ಹನಿ ಮಳೆಯಾಗಿದೆ.
ರಾಜ್ಯದಲ್ಲಿ ಇಂದಿನಿಂದ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಿಸಿಲಿನ ಧಗೆ ಹೆಚ್ಚುತ್ತಿರುವಂತೆ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದೆ.ಸಮುದ್ರದ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಕಾರಣ ರಾಜ್ಯದ ನಾನಾ ಕಡೆ ಮಂಗಳವಾರದಿಂದ 5 ದಿನ ಹಗುರ ಮಳೆಯಾಗಲಿದೆ ಎಂದು ತಿಳಿಸಿದೆ. ಮಾ.14 ರಿಂದ 18ರ ವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ.