News Kannada
Saturday, April 01 2023

ಮಂಗಳೂರು

ಉಳ್ಳಾಲ: ಚೂರಿಯಿಂದ ಇರಿದು ಮಹಿಳೆಯ ಹತ್ಯೆ, ಜತೆಗಿದ್ದ ಯುವಕ ಪರಾರಿ

Ullal: Woman stabbed to death
Photo Credit : News Kannada

ಉಳ್ಳಾಲ: ಮಹಿಳೆಯನ್ನು ಚೂರಿಯಿಂದ ಇರಿದು ಹತ್ಯೆ ನಡೆಸಿರುವ ಘಟನೆ ಉಳ್ಳಾಲದ ಕೋಟೆಪುರ ಬಸ್ ನಿಲ್ದಾಣದ ಸಮೀಪ ಸಂಜೆ ವೇಳೆ ಬೆಳಕಿಗೆ ಬಂದಿದೆ.

ದೆಹಲಿ ಮೂಲದ 35-40 ರ ಹರೆಯದ ಮಹಿಳೆ ಹತ್ಯೆ ನಡೆದಿದೆ. ಈಕೆ ಜತೆಗಿದ್ದ ಅದೇ ಊರಿನ ನಯೀಮ್ (35) ಎಂಬಾತ ತಲೆಮರೆಸಿಕೊಂಡಿದ್ದಾನೆ. ಎರಡು ದಿನಗಳ ಹಿಂದೆ ಕೋಟೆಪುರಕ್ಕೆ ಬಂದಿದ್ದ ಜೋಡಿ , ಸ್ಥಳೀಯ ಸೆಲೂನ್ ಮಾಲೀಕರ ಮೂಲಕ ಬಾಡಿಗೆ ಮನೆಯನ್ನು ಸಂಪರ್ಕಿಸಿ, ಹಮೀದ್ ಎಂಬವರ ಬಾಡಿಗೆ ಮನೆಯನ್ನು ಪಡೆದುಕೊಂಡಿದ್ದರು. ಮನೆಗೆ ಬರುವಾಗ ಬಟ್ಟೆ ವ್ಯಾಪಾರ ನಡೆಸುವವರು ಎಂದು ತಿಳಿಸಿದ್ದು, ಇನ್ನೇನು ಬಟ್ಟೆಗಳು ಬರಬೇಕಿದೆ ಎಂದು ತಿಳಿಸಿ ಮನೆಯಲ್ಲಿದ್ದರು.

ಇಂದು ಸಂಜೆ ವೇಳೆ ಇಬ್ಬರೂ ಮನೆಯಿಂದ ಹೊರಬಾರದೇ ಇರುವುದನ್ನು ಗಮನಿಸಿ ಯುವಕನೋರ್ವ ಮನೆಯನ್ನು ಗಮನಿಸಿದಾಗ ಶೌಚಾಲಯದೊಳಕ್ಕೆ ಮಹಿಳೆ ಮೃತದೇಹ ಚೂರಿಯಿಂದ ಇರಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

See also  ಪುತ್ತೂರು: ಪತಿಶಿಷ್ಟ ಜಾತಿ, ಪಂಗಡದ ಹಿತರಕ್ಷಣಾ ಮತ್ತು ಕುಂದುಕೊರತೆ ನಿವರಣಾ ಸಮಿತಿ ಸಭೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು