ಮಂಗಳೂರು: ಸ್ಮಾರ್ಟ್ ಸಿಟಿ ವತಿಯಿಂದ 8.50 ಕೋಟಿ ರೂ.ಗಳ ವೆಚ್ಚದಲ್ಲಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾವೂರು ಕೆರೆಯ ಪುನಶ್ಚೇತನ ಹಾಗೂ ಅಭಿವೃದ್ಧಿ ಕಾಮಗಾರಿಯ ಉದ್ಘಾಟನೆಯನ್ನು ಸಂಸದರಾದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕರಾದ ಡಾ. ಭರತ್ ಶೆಟ್ಟಿ, ಮಂಗಳೂರು ಮೇಯರ್ ಜಯಾನಂದ ಅಂಚನ್ ಅವರು ಮಾರ್ಚ್ 21ರ ಮಂಗಳವಾರ ಸಂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಕಾರ್ಪೊರೇಟರ್ ಗಳು, ಸಾರ್ವಜನಿಕರು, ಸ್ಮಾರ್ಟ್ ಸಿಟಿ ಅಧಿಕಾರಿಗಳಾದ ಅರುಣ್ ಪ್ರಭಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.