ಮಂಗಳೂರು: ಇಲ್ಲಿನ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 8 ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ವಶಕ್ಕೆ ಪಡೆದು ಕೊಂಡಿರುವ ಮಾದಕ ವಸ್ತುಗಳಾದ ಗಾಂಜಾ ಮತ್ತು ಎಂಡಿಎಂಎಯನ್ನು ಮುಲ್ಕಿಯ ಕೈಗಾರಿಕಾ ಪ್ರದೇಶದಲ್ಲಿ ಶುಕ್ರವಾರ ನಾಶಪಡಿಸಲಾಯಿತು.
ಸೆನ್ ಪೊಲೀಸ್ ಠಾಣಾ ವ್ಯಾಪ್ತಿಯ 6 ಪ್ರಕರಣಗಳಲ್ಲಿ ವಶಕ್ಕೆ ಪಡೆಯಲಾಗಿರುವ 1ಕೆಜಿ 802 ಗ್ರಾಂ ಗಾಂಜಾ, ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣಗಳಲ್ಲಿ ವಶಕ್ಕೆ ಪಡೆದಿರುವ 1ಕೆಜಿ 328 ಗ್ರಾಂ ಗಾಂಜಾ, ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಒಂದು ಪ್ರಕರಣದಲ್ಲಿ ವಶಕ್ಕೆ ಪಡೆಯಲಾಗಿದ್ದ 520 ಗ್ರಾಂ ಗಾಂಜಾ, ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಒಂದು ಪ್ರಕರಣದಲ್ಲಿ ವಶಕ್ಕೆ ಪಡೆಯಲಾಗಿರುವ 1ಕೆಜಿ 218 ಗ್ರಾಂ ಗಾಂಜಾ, ಮಂಗಳೂರು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿ 6 ಪ್ರಕರಣಗಳಲ್ಲಿ ವಶಕ್ಕೆ ಪಡೆಯಲಾಗಿರುವ 2ಕೆಜಿ 456 ಗ್ರಾಂ ಗಾಂಜಾ ಮತ್ತು 0.14 ಗ್ರಾಂ ಎಂಡಿಎಂಎ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ 3 ಪ್ರಕರಣಗಳಲ್ಲಿ 15ಜಿ 510 ಗ್ರಾಂ ಗಾಂಜಾ, ಬಜೈ ಪೊಲೀಸ್ ಠಾಣಾ ವ್ಯಾಪ್ತಿಯ 2ಪ್ರಕರಣಗಳಲ್ಲಿ ವಶಕ್ಕೆ ಪಡೆಯಲಾಗಿರುವ 1ಕೆಜಿ 660ಗ್ರಾಂ ಗಾಂಜಾ ಮತ್ತು ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯ 1 ಪ್ರಕರಣದಲ್ಲಿ ವಶಕ್ಕೆ ಪಡೆಯಲಾಗಿರುವ 700ಗ್ರಾಂ ಗಾಂಜಾ ಸೇರಿ ಒಟ್ಟು ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ಒಟ್ಟು 11 ಕೆಜಿ 194 ಗ್ರಾಂ ಗಾಂಜಾ ಮತ್ತು 14 ಮಿ.ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ನಾಶ ಪಡಿಸಲಾಯಿತು.
ಈ ಸಂದರ್ಭ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಕುಲದೀಪ್ ಜೈನ್, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್, 8 ಪೊಲೀಸ್ ಠಾಣೆಗಳ ಪೊಲೀಸ್ ನಿರೀಕ್ಷಕರು ಇದ್ದರು.