ಮಂಗಳೂರು: ದಾಖಲೆ ಇಲ್ಲದೆ ಸಾಗಾಟ ಮಾಡುತ್ತಿದ್ದ 1.10 ಲಕ್ಷ ರೂ. ಹಣವನ್ನು ಮಂಗಳೂರು ಪೂರ್ವ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಂತೂರು ಜಂಕ್ಷನ್‌ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಕಾರಿನಲ್ಲಿ ಹಣ ಸಾಗಾಟ ಮಾಡುತ್ತಿರುವುದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಹಣದ ಬಗ್ಗೆ ದಾಖಲೆ ನೀಡುವಂತೆ ಕಾರಿನಲ್ಲಿದ್ದ ಕಾಸರಗೋಡಿನ ಅನಿಲ್, ಶಮೀಲ್ ಅವರನ್ನು ವಿಚಾರಿಸಿದಾಗ ಸಮರ್ಪಕ ಉತ್ತರ ನೀಡಿಲ್ಲ ಈ ಕಾರಣದಿಂದ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.