ಮಂಗಳೂರು: ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ತಯಾರಿಗೆ ಮುಖಂಡರು ದಿನವಿಡಿ ಸಭೆ ನಡೆಸುತ್ತಿದ್ದಾರೆ. ಅಲ್ಲದೇ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ ಕಾರ್ಯ ನಡೆದಿದ್ದು, ಸರ್ವೆ, ಜಾತಿ ಅಂಶಗಳ ಆಧಾರದಲ್ಲಿ ಏಪ್ರಿಲ್ 7 ಅಥವಾ 8ರಂದು ಟಿಕೇಟ್ ಘೋಷಣೆಯಾಗಲಿದೆ ಎನ್ನಲಾಗಿದೆ.
ಈ ನಡುವೆ ವಿಧಾನ ಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ನಕಲಿ ಪಟ್ಟಿಯೊಂದು ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಬಗ್ಗೆ ಸ್ವತಃ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ಟ್ವೀಟ್ ಮಾಡಿದ್ದು, ಜಾಲತಾಣದಲ್ಲಿ ಹರಿದಾಡುತ್ತಿರುವ ಪಟ್ಟಿ ಪಕ್ಷದ ಅಧಿಕೃತ ಪಟ್ಟಿಯಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ನಮ್ಮ ಪಕ್ಷವು ಆಂತರಿಕ ಪ್ರಜಾಪ್ರಭುತ್ವವನ್ನು ಗೌರವಿಸಿ, ಪಕ್ಷದ ಕಾರ್ಯಕರ್ತರ ಆಯ್ಕೆ ಪ್ರಕ್ರಿಯೆ ನಡೆಸುತ್ತದೆ. ಈ ಸಮಯದಲ್ಲಿ ಸುಳ್ಳು ಅಭ್ಯರ್ಥಿಗಳ ಪಟ್ಟಿ ಹರಿಬಿಟ್ಟು ಕುತ್ಸಿತ ಮನಸ್ಥಿತಿಗಳು ರಾಜ್ಯದ ಜನತೆಯ ದಾರಿ ತಪ್ಪಿಸುತ್ತಿವೆ ಎಂದಿದ್ದಾರೆ.
ನಮ್ಮ ಪಕ್ಷವು ಆಂತರಿಕ ಪ್ರಜಾಪ್ರಭುತ್ವವನ್ನು ಗೌರವಿಸಿ, ಪಕ್ಷದ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಸುತ್ತಿದೆ.
ಈ ಸಮಯದಲ್ಲಿ ಸುಳ್ಳು ಅಭ್ಯರ್ಥಿಗಳ ಪಟ್ಟಿ ಹರಿಬಿಟ್ಟು ಕುತ್ಸಿತ ಮನಸ್ಥಿತಿಗಳು ರಾಜ್ಯದ ಜನತೆಯ ದಾರಿ ತಪ್ಪಿಸುತ್ತಿವೆ. pic.twitter.com/JJo2sDIL16— Nalinkumar Kateel (@nalinkateel) April 4, 2023