ಪುತ್ತೂರು: ಚುನಾವಣೆ ಸಮೀಪಕ್ಕೆ ಬರುತ್ತಿದ್ದಂತೆ ರಾಜಕೀಯ ಗರಿಗೆದರಿದೆ. ಅದರಂತೆ ಪುತ್ತೂರಿನಲ್ಲಿ ಗೌಡ ಸಮುದಾಯದಾಯದ ನಾಯಕ ಹಾಲಿ ಶಾಸಕ ಸಂಜೀವ ಮಠಂದೂರು ಅವರಿಗೆ ಈ ಭಾರಿಯೂ ಅವಕಾಶ ಕೊಡಬೇಕೆಂದು ಒಕ್ಕಲಿಗ ಗೌಡ ಸಂಘದ ನಿಯೋಗವೊಂದು ಶ್ರೀ ಆದಿ ಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರನ್ನು ಭೇಟಿ ಮಾಡಿ ಚರ್ಚೆ ಮಾಡಿದೆ.
ಈ ವಿಚಾರ ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಮಠಂದೂರು ಅವರನ್ನು ಬಿಟ್ಟು ಬೇರೆ ಯಾರಿಗೂ ಅಭ್ಯರ್ಥಿ ಸ್ಥಾನ ಕೊಡಬಾರದು ಎಂದು ಆದಿ ಚುಂಚನಗಿರಿ ಮಂಗಳೂರು ಶಾಖಾ ಮಠದ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರ ನೇತೃತ್ವದಲ್ಲಿ ಒಕ್ಕಲಿಗ ಸ್ವಸಹಾಯ ಸಂಘದ ಸ್ಥಾಪಕ ಅಧ್ಯಕ್ಷ ಎ.ವಿ.ನಾರಾಯಣ, ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ ಮೊದಲಾದವರು ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಭೇಟಿ ಯಾಗಿ ಮನವಿ ಸಲ್ಲಿಸಿದ್ದಾರೆ.