ಮಂಗಳೂರು: ರಾಜ್ಯ ವಿಧಾನ ಸಭಾ ಚುನಾವಣೆ ಹಿನ್ನಲೆ ಚುನಾವಣೆ ಸಂದರ್ಭ ಬಂದೋಬಸ್ತ್ ಗಾಗಿ ಮೊದಲ ಹಂತದಲ್ಲಿ 4 ಸಿಆರ್ ಪಿ ಎಫ್ ತಂಡಗಳು ಜಿಲ್ಲೆಗೆ ಆಗಮಿಸಿವೆ.
ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಸುಳ್ಯ ವಿಧಾನ ಸಭಾ ಕ್ಷೇತ್ರಗಳಿಗೆ ತಲಾ ಒಂದ ರಂತೆ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಮುಂದೆ ಇನ್ನೂ ಹೆಚ್ಚಿನ ತಂಡಗಳು ಚುನಾವಣೆ ಕರ್ತವ್ಯಕ್ಕೆ ಆಗಮಿಸಲಿವೆ.
ಈ ತಂಡಗಳು ಚುನಾವಣೆ ಗೆ ಸಂಬಂಧಿಸಿದಂತೆ ಪ್ರದೇಶದ ಭದ್ರತೆ, ಚೆಕ್ ಪೋಸ್ಟ್ ಕರ್ತವ್ಯ, ಸ್ಟ್ರಾಂಗ್ ರೂಮ್ ಭದ್ರತೆ ಕರ್ತವ್ಯ, ಪ್ರಮುಖ ಸ್ಥಳಗಳಲ್ಲಿ ರೂಟ್ ಮಾರ್ಚ್, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸ್ಥಳೀಯ ಪೊಲೀಸ್ ರಿಗೆ ಸಹಾಯಕ ಕರ್ತವ್ಯ ಹಾಗೂ ಇತರ ಚುನಾವಣೆ ಗೆ ಸಂಬಂಧಿಸಿದ ಕರ್ತವ್ಯ ಗಳನ್ನು ನಿರ್ವಹಿಸಲಿವೆ.