ಮಂಗಳೂರು: ಕರಾವಳಿ ಭಾಗಕ್ಕೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಕರಾವಳಿಯಲ್ಲಿ ಏ.7ರಂದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬುಧವಾರ ಸೆಖೆಯ ಬೇಗೆ ಹೆಚ್ಚು ಇತ್ತು. ಮಂಗಳೂರಿನಲ್ಲಿ 32.6 ಡಿ.ಸೆ. ಗರಿಷ್ಠ ಮತ್ತು 23.5 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು. ಕೆಲವು ಕಡೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದೇ ವೇಳೆ ಸುಬ್ರಹ್ಮಣ್ಯ, ಕಡಬ ಪ್ರದೇಶದಲ್ಲಿ ಬುಧವಾರ ಸಂಜೆ ಮಳೆಯಾಗಿದ್ದು, ಬಿಸಿಲ ಬೇಗೆಯಿಂದ ಬೆಂದ ಜನರು ಅಲ್ಪ ನಿರಾಳರಾಗಿದ್ದಾರೆ.