News Kannada
Thursday, June 01 2023
ಮಂಗಳೂರು

ಯಕ್ಷಧ್ರುವ ಪಟ್ಲ ಸಂಭ್ರಮ-೨೦೨೩: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Yakshadhruva Patla Sambhrama-2023: Applications invited for scholarships
Photo Credit : News Kannada

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ಆಶ್ರಯದಲ್ಲಿ ಯಕ್ಷಧ್ರುವ ಪಟ್ಲ ಸಂಭ್ರಮ-೨೦೨೩ನೇ ಸಾಲಿನ ವಿದ್ಯಾರ್ಥಿ ವೇತನಕ್ಕೆ ಯಕ್ಷಗಾನ ಕಲಾ ವಿದರ (ವೃತ್ತಿಪರ/ಹವ್ಯಾಸಿ/ಮಹಿಳಾ) ಮಕ್ಕಳಿಂದ ಅರ್ಜಿ  ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಕನಿಷ್ಠ ೫೫ ಶೇ ಅಂಕಗಳಿರಬೇಕು. ಅಂಕ ಪಟ್ಟಿ ಹಾಗೂ ಬ್ಯಾಂಕ್‌ನ ಉಳಿತಾಯ ಖಾತೆಯ ನಕಲು ಪ್ರತಿಗಳನ್ನು ಲಗತ್ತಿಸಬೇಕು. ಪ್ರತಿಸಾರಿಯಂತೆ ಈ ಬಾರಿಯೂ ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ.ಯಲ್ಲಿ ೯೦% ಕ್ಕೂ ಮೇಲ್ಪಟ್ಟು ಅತ್ಯಧಿಕ ಅಂಕ ಗಳಿಸಿದ ತಲಾ ಒಬ್ಬ ವಿದ್ಯಾರ್ಥಿಗೆ ಬಂಗಾರದ ಪದಕದೊಂ ದಿಗೆ ಪ್ರತಿಭಾ ಪುರಸ್ಕಾರ ನೀಡಲಾಗು ವುದು. ಇದರೊಂದಿಗೆ ವಿದ್ಯಾರ್ಥಿ ಪುರಸ್ಕಾರವನ್ನು ಪ್ರಾಥಮಿಕ, ಪ್ರೌಢ, ಪಿ.ಯು.ಸಿ., ಡಿಪ್ಲೋಮ, ಪದವಿ ಹಾಗೂ ಸ್ನಾತಕೋತ್ತರ ಪದವಿ ಹೀಗೆ ಒಟ್ಟು ೫ ವಿಭಾಗಗಳಲ್ಲಿ ಪ್ರತ್ಯೇಕವಾಗಿ ಅತಿ ಹೆಚ್ಚು ಅಂಕ ಗಳಿಸಿದ ತಲಾ ಒಬ್ಬ ವಿದ್ಯಾರ್ಥಿಗೆ ನೀಡಲಾಗುವುದು. ವೃತ್ತಿ ಪರ ಕಲಾವಿದರ ಎಲ್ಲಾ ಮಕ್ಕಳಿಗೂ (೫೦% ಗಿಂತ ಮೇಲ್ಪಟ್ಟು ಅಂಕಗಳನ್ನು ಗಳಿಸಿದ್ದರೆ) ವಿದ್ಯಾರ್ಥಿ ಪ್ರೋತ್ಸಾಹ ಧನವನ್ನು ನೀಡಲಾಗುವುದು.

ಅರ್ಜಿ ನಮೂನೆಯನ್ನು, ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು, ಕೇಂದ್ರ ಕಛೇರಿ, ಎಂಪೈರ್‌ಮಾಲ್, ಇಲ್ಲಿ ಪಡೆದುಕೊಳ್ಳ ಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ೨೦-೦೫-೨೦೨೩ ಹೆಚ್ಚಿನ ವಿವರಗಳಿಗಾಗಿ ಡಾ. ಮನು ರಾವ್, ಉಪಾಧ್ಯಕ್ಷರು (೯೮೪೪೦೮೭೬೬೪) ಅವರನ್ನು ಸಂಪರ್ಕಿಸಬಹುದು.

See also  ಮಂಗಳೂರು: ಪಂಪವೆಲ್ ಬಳಿ ಲಾಡ್ಜ್ ನಲ್ಲಿ ನಗ್ನ ಸ್ಥಿತಿಯಲ್ಲಿ ವ್ಯಾಪಾರಿಯ ಮೃತದೇಹ ಪತ್ತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

11671
Media Release

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು